Advertisement
ಹೊಸಂಗಡಿ ಗ್ರಾಮದ ಪೆರಿಂಜೆ ಹರಿ ಓಂ ಕಾಂಪ್ಲೆಕ್ಸ್ ನಲ್ಲಿ ರವಿವಾರ ಜರಗಿದ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಇದರ ಉದ್ಘಾಟನ ಸಮಾರಂಭದಲ್ಲಿ ದ್ವೀಪ ಪ್ರಜ್ವಲಿಸಿ, ಆಶೀರ್ವಚನ ನೀಡಿದ ಸ್ವಾಮೀಜಿ, ಮನುಷ್ಯನ ಬುದ್ಧಿ, ಮನಸ್ಸು, ಯೋಚನ ಶಕ್ತಿ ಇಂದು ಬದಲಾಗಿದೆ. ಆಧ್ಯಾತ್ಮದ ಕಡೆಗೆ ಒಲವು ತೋರಿಸಬೇಕಿದೆ. ದ್ವೇಷ ಭಾವನೆ ಬಿಟ್ಟು ಎಲ್ಲರನ್ನು ಪ್ರೀತಿಯಿಂದ ಕಂಡಾಗ ಸಾಮರಸ್ಯ ನೆಲೆಯಾಗಲು ಸಾಧ್ಯ ಎಂದರು.
ಶ್ರೀಕ್ಷೇತ್ರ ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಗ್ರಾಮೀಣ ಭಾಗದ ಬಡ ಜನತೆಯ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಸಹಕಾರಿ ಸಂಘವನ್ನು ನಿರ್ಮಿಸಲಾಗಿದೆ. ಅಲ್ಲಲ್ಲಿ ಸ್ವಸಹಾಯ ಸಂಘಗಳನ್ನು ಜಾರಿಗೆ ತರಲಾಗುತ್ತಿದ್ದು, ವಿಸ್ತರಿಸುವ ಯೋಜನೆ ಇದೆ ಎಂದರು. ಶಿರ್ವ ನಡಿಬೆಟ್ಟುವಿನ ನಿತ್ಯಾನಂದ ಹೆಗ್ಡೆ ನೂತನ ಕಚೇರಿಯನ್ನು ಉದ್ಘಾಟಿಸಿದರು. ಶ್ರೀಕ್ಷೇತ್ರ ಕರಿಂಜೆಯ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜೆ. ಸುಧೀರ್ ಹೆಗ್ಡೆ ಬೈಲೂರು ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಹೊಸಂಗಡಿ ಅರಮನೆಯ ಸುಕುಮಾರ್ ಶೆಟ್ಟಿ, ಬರೋಡಾದ ಉದ್ಯಮಿ ಶಶಿಧರ ಶೆಟ್ಟಿ, ಪೆರಿಂಜೆ ಬಡಕೋಡಿಗುತ್ತುವಿನ ಡಾ| ಕೆ.ಆರ್. ಪ್ರಸಾದ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಇದರ ನಿರ್ದೇಶಕ ಮಂಜುನಾಥ್ ಎಸ್.ಕೆ., ಮಂಗಳೂರು ಶ್ರೀ ಮಾತೃಭೂಮಿ ಸೌಹಾರ್ದ ಸಹಕಾರಿ ಇದರ ಆಡಳಿತ ನಿರ್ದೇಶಕ ಕೃಷ್ಣ ಕೊಂಪದವು, ಕಾಪುವಿನ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಹೊಸಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ಲಲಿತಾ ಟಿ. ಹೆಗ್ಡೆ, ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಇದರ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಶಶಿಕಲಾ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.
Related Articles
Advertisement
ಶ್ರೀಕ್ಷೇತ್ರ ಕರಿಂಜೆಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಮೂಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಆಗಮಿಸಿದ್ದರು.
ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಇದರ ಉಪಾಧ್ಯಕ್ಷ ಸುಧಾಕರ ನೂಯಿ ಪ್ರಸ್ತಾವಿಸಿ, ಸ್ವಾಗತಿಸಿದರು. ಸಂತೋಷ್ ಕುಲಾಲ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಸುಲೋಚನಾ ವಂದಿಸಿದರು.