Advertisement

ಎಸ್ಸೆಸ್ಸೆಲಿ ಪರೀಕ್ಷೆ  ಫಲಿತಾಂಶ ಉನ್ನತೀಕರಿಸಿ: ಸಚಿವ ಮಹೇಶ

04:15 PM Aug 17, 2018 | |

ಗದಗ: ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಉನ್ನತೀಕರಿಸಿ, ಮಕ್ಕಳ ಭವಿಷ್ಯ ಉಜ್ವಲವಾಗಿಸಲು ಪ್ರಯತ್ನಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್‌. ಮಹೇಶ್‌ ಅವರು ಅ ಧಿಕಾರಿಗಳಿಗೆ ಸಲಹೆ ನೀಡಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ 2018ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ  ಫಲಿತಾಂಶ ಶೇ.67.52ರಷ್ಟು ದಾಖಲಾಗಿದೆ. 12870 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 8690 ಮಕ್ಕಳು ಉತ್ತೀಣರಾಗಿದ್ದಾರೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.

Advertisement

ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪ್ರಸಕ್ತ 2019ನೇ ಸಾಲಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಉನ್ನತೀಕರಿಸಬೇಕು. ಈ ನಿಟ್ಟಿನಲ್ಲಿ ಬಿಇಒ, ಸಬ್ಜೆಕ್ಟ್ ಇನ್ಸ್‌ ಪೆಕ್ಟರ್‌, ಶಿಕ್ಷಕರು ಹಾಗೂ ಮುಖ್ಯಗುರು ಹೆಚ್ಚಿನ ಆಸಕ್ತಿ ವಹಿಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರತ್ಯೇಕ ಬೋಧನೆ ಮಾಡಬೇಕು. ಮುಖ್ಯಗುರ ಕಾರ್ಯಾಗಾರ ಏರ್ಪಡಿಸಲು ಸಲಹೆ ನೀಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೂಲ ಸೌಕರ್ಯಗಳು, ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌ ವಿತರಣೆ, ಸಮವಸ್ತ್ರ ವಿತರಣೆ, ಆರ್‌ಟಿಎ ಕಾಯ್ದೆಯಡಿ ಶಾಲಾ ಮಕ್ಕಳ ದಾಖಲಾತಿ ಕುರಿತು ಚರ್ಚಿಸಲಾಯಿತು. 

Advertisement

Udayavani is now on Telegram. Click here to join our channel and stay updated with the latest news.

Next