Advertisement

ಪಾಕ್ ಪ್ರಧಾನಿಯಾಗಿ ಆ. 11ರಂದು ಇಮ್ರಾನ್ ಖಾನ್ ಪ್ರಮಾಣವಚನ

06:25 PM Jul 30, 2018 | Sharanya Alva |

ಪೇಶಾವರ್: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಆಗಸ್ಟ್ 11ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಆಗಸ್ಟ್ 14ರ ಮೊದಲು ಇಮ್ರಾನ್ ಖಾನ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಈ ಮೊದಲು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಸಂಸ್ಥಾಪಕ ಇಮ್ರಾನ್ ಖಾನ್ ಪಕ್ಷ ಪಾಕಿಸ್ತಾನ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸರ್ಕಾರ ರಚಿಸಲು ಬೇಕಾದಷ್ಟು ಬಹುಮತ ಸಿಕ್ಕಿರಲಿಲ್ಲವಾಗಿತ್ತು.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸಣ್ಣ ಪಕ್ಷಗಳು ಹಾಗೂ ಪಕ್ಷೇತರರ ನೆರವಿನೊಂದಿಗೆ ಸರ್ಕಾರ ರಚಿಸುವುದಾಗಿ ಪಿಟಿಐ(ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್) ಪಕ್ಷ ಘೋಷಿಸಿತ್ತು. ಆಗಸ್ಟ್ 11ರಂದು ಖಾನ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸವುದಾಗಿ ತಿಳಿಸಿದ್ದಾರೆಂದು ರೇಡಿಯೋ ಪಾಕಿಸ್ತಾನ್ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next