Advertisement

ಇಮ್ರಾನ್ ಖಾನ್ ಹತ್ಯೆ ವದಂತಿ: ಇಸ್ಲಾಮಾಬಾದ್‌ನಲ್ಲಿ ಪೊಲೀಸರ ಕಟ್ಟೆಚ್ಚರ

06:32 PM Jun 05, 2022 | Team Udayavani |

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವದಂತಿಗಳ ಮಧ್ಯೆ, ಇಸ್ಲಾಮಾಬಾದ್ ಪೊಲೀಸ್ ಇಲಾಖೆ ಶನಿವಾರ ರಾತ್ರಿ ನಗರದ ಬನಿ ಗಾಲಾದ ಅಕ್ಕಪಕ್ಕದ ಪ್ರದೇಶಗಳಲ್ಲಿ ಭದ್ರತಾ ಏಜೆನ್ಸಿಗಳ ಮೂಲಕ ಕಟ್ಟೆಚ್ಚರ ವಹಿಸಿದೆ.

Advertisement

ಇಸ್ಲಾಮಾಬಾದ್‌ನಲ್ಲಿ ಈಗಾಗಲೇ ಸೆಕ್ಷನ್ 144 ವಿಧಿಸಲಾಗಿದೆ, ಜ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಎಂದು ಇಸ್ಲಾಮಾಬಾದ್ ಪೊಲೀಸ್ ವಕ್ತಾರರು ಶನಿವಾರ ತಿಳಿಸಿದ್ದಾರೆ.

“ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ನಲ್ಲಿರುವ ವಸತಿ ಪ್ರದೇಶವಾಗಿರುವ ಬನಿ ಗಾಲಾಕ್ಕೆ ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ, ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ. ಇಸ್ಲಾಮಾಬಾದ್ ಪೊಲೀಸರು ಇಲ್ಲಿಯವರೆಗೆ ಇಮ್ರಾನ್ ಖಾನ್ ತಂಡ ಭೇಟಿ ನೀಡುವ ಯಾವುದೇ ದೃಢೀಕೃತ ಸುದ್ದಿಯನ್ನು ಸ್ವೀಕರಿಸಿಲ್ಲ” ಎಂದು ಇಸ್ಲಾಮಾಬಾದ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ವಿದೇಶದಿಂದ “ತೆಗೆದುಹಾಕಬೇಕು” ಇಲ್ಲದಿದ್ದರೆ ಪಾಕಿಸ್ತಾನವು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಂದೇಶವನ್ನು ಸ್ವೀಕರಿಸಿದ ಒಂದು ದಿನದ ನಂತರ ಈ ಸುದ್ದಿ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next