Advertisement
ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ಕೆ.ಆರ್.ನಗರದ ರೇಡಿಯೋ ಮೈದಾನದಲ್ಲಿ ಆಯೋಜಿಸಿದ್ದ ಕೃಷ್ಣರಾಜ ನಗರ ವಿಧಾನಸಭಾ ಕ್ಷೇತ್ರದ ಬೂತ್‌ಮಟ್ಟದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
Related Articles
Advertisement
ನಮ್ಮ ಸರ್ಕಾರ ಕಳೆದ 4 ವರ್ಷ 5 ತಿಂಗಳ ಅವಧಿಯಲ್ಲಿ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದರು. ಈ ಹಿಂದಿನ ಯಾವುದೇ ಸರ್ಕಾರ ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ಆದರೆ, ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ ಈಗಾಗಲೇ 155 ಭರವಸೆ ಈಡೇರಿಸಿ ನೂರಕ್ಕೆ ನೂರರಷ್ಟು ನುಡಿದಂತೆ ನಡೆದಿದ್ದೇವೆಂದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್, ಸಚಿವೆ ಡಾ.ಗೀತಾ, ಸಂಸದ ಆರ್.ಧ್ರುವನಾರಾಯಣ್, ಶಾಸಕರಾದ ಕೆ.ವೆಂಕಟೇಶ್, ಎಚ್.ಪಿ.ಮಂಜುನಾಥ್, ಕೆ.ಆರ್.ನಗರದ ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ, ಜಿಪಂ ಮಾಜಿ ಸದಸ್ಯ ಎಂ.ಟಿ.ಕುಮಾರ್ ಮಾತನಾಡಿದರು.
ಶಾಸಕ ಕಳಲೆ ಕೇಶವಮೂರ್ತಿ, ಮೈಲ್ಯಾಕ್ ಅಧ್ಯಕ್ಷ ಎಚ್.ಎ.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜಿಪಂ ಸದಸ್ಯರಾದ ಡಿ.ರವಿಶಂಕರ್, ಡಾ.ಪುಷ್ಪಾ, ಕಾಂಗ್ರೆಸ್ ಮುಖಂಡರಾದ ಅನುರಾಧಾ, ಐಶ್ವರ್ಯ ಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹದೇವ್, ಉದಯ ಕುಮಾರ್, ನಂದಿನಿ ಮತ್ತಿತರರಿದ್ದರು.ನ.15ರಿಂದ ಎಲ್ಲರಿಗೂ ಆರೋಗ್ಯ ಭಾಗ್ಯ
ನ.15ರಿಂದ ಯೂನಿವರ್ಸಲ್ ಹೆಲ್ತ್ ಸ್ಕೀಂ ಆರೋಗ್ಯ ಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಡಿ.1ರಿಂದ ಅನಿಲಭಾಗ್ಯ ಯೋಜನೆ ಜಾರಿ ಮಾಡಿ ರಾಜ್ಯದ 15 ಲಕ್ಷ ಕುಟುಂಬಗಳಿಗೆ ಉಚಿತ ಅನಿಲ ಭಾಗ್ಯ ಮಾತ್ರವಲ್ಲ, ಗ್ಯಾಸ್‌ಸ್ಟೌ, ರೀಫಿಲ್ ಎಲ್ಲಾ ಸೌಲಭ್ಯವನ್ನೂ ಕಲ್ಪಿಸುತ್ತೇವೆ. ಆ ಮೂಲಕ ರಾಜ್ಯದ ಎಲ್ಲಾ ಕುಟುಂಬಗಳೂ ಸೀಮೆಎಣ್ಣೆ ಬಿಟ್ಟು ಗ್ಯಾಸ್‌ನಿಂದ ಅಡುಗೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ತಿಳಿಸಿದರು.