Advertisement

2018ರಲ್ಲಿ ರಾಜ್ಯದಲ್ಲಿ ಮೋದಿ ಜಾದೂ

02:34 PM Mar 26, 2017 | Team Udayavani |

ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ್ದು ಮುಗಿದ ಅಧ್ಯಾಯ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜಾದೂ ನಮ್ಮನ್ನು ಅಧಿಕಾರಕ್ಕೆ ತರಲಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ, ಬಿಜೆಪಿ ರಾಜ್ಯ ಸಹ ವಕ್ತಾರ ಶಶೀಲ್‌ ಜಿ. ನಮೋಶಿ ಹೇಳಿದರು. 

Advertisement

ಇಲ್ಲಿನ ಬಿಜೆಪಿ ಮಹಾನಗರ ಜಿಲ್ಲಾ ಘಟಕದಿಂದ ಪಕ್ಷದ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉತ್ತರ ಮಂಡಲ 3ನೇ ಕಾರ್ಯಕಾರಣಿ ಉದ್ಘಾಟಿಸಿ ಅವರು ಮಾತನಾಡಿದರು. ದೇಶದೆಲ್ಲೆಡೆ ಈಗ ಮೋದಿ ಅವರ ಪರ ಗಾಳಿ ಬೀಸುತ್ತಿದೆ. ಇದು ಮುಂದಿನ ವಿಧಾನಸಭೆ, ಲೋಕಸಭೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ತಂದು ಕೊಡಲಿದೆ.

ಹಿರಿಯ ರಾಜಕಾರಣಿ ಎಸ್‌.ಎಂ. ಕಣಿಷ್ಣ ಬಿಜೆಪಿ ಸೇರ್ಪಡೆಗೊಂಡ ಬೆನ್ನಲ್ಲೆ ಹಲವು ಕಾಂಗ್ರೆಸ್‌ನ ನಾಯಕರು ಬಿಜೆಪಿಯತ್ತ ಮುಖಮಾಡುತ್ತಿದ್ದಾರೆ. ಅಭಿವೃದ್ಧಿ ಇಲ್ಲದ ಹಾಗೂ ರೈತರ ಸಾಲ ಮನ್ನಾ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ಕುರ್ಚಿಯಿಂದ ಕೆಳಗೆ ಇಳಿಯಲಿದ್ದಾರೆ ಎಂದರು. 

ವಿಧಾನ ಪರಿಷತ್‌ ಸದಸ್ಯ ಬಿ.ಜಿ.ಪಾಟೀಲ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಗುರಿಯಾದ 150 ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವಂತಾಗಲು ಕಾರ್ಯಕರ್ತರು ಕೈಜೋಡಿಬೇಕೆಂದು ಹೇಳಿದರು. 

ಬಿಜೆಪಿ ಹಿಂದುಳಿದ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರಾಜಗೋಪಾಲರೆಡ್ಡಿ ಮುದಿರಾಜ್‌ ಮಾತನಾಡಿ, ಉತ್ತರ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಕರ್ನಾಟಕದಲ್ಲಿ ಹೊಸ ಆಸೆಯನ್ನು ಮೂಡಿಸಿದೆ. ನೋಟು ಬ್ಯಾನ್‌ ತೊಡಕಾಗಬಹುದು ಎಂದು ಅಂದಾಜಿಸಲಾಗಿತ್ತು, 

Advertisement

ಆದರೆ, ಉತ್ತರದ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿರುವುದು ಜನರು ಒಪ್ಪಿಗೆ ಸೂಚನೆಯಾಗಿದೆ. ಕಲಬುರಗಿ ಉತ್ತರ ಹಾಗೂ ಕಲಬುರಗಿ ದಕ್ಷಿಣ ಮತಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಯಾರೇ ಆಗಲಿ. ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ನಮ್ಮ ಕಾರ್ಯಕರ್ತರು ಇನ್ನಷ್ಟು ಶ್ರಮವಹಿಸಬೇಕು ಎಂದರು. 

ಎಚ್‌.ಕೆ.ಡಿ.ಬಿ. ಮಾಜಿ ಅಧ್ಯಕ್ಷ ಮಹಾಂತಗೌಡ, ಉತ್ತರ ಮಂಡಲ ಅಧ್ಯಕ್ಷ ಚನ್ನವೀರ, ಪ್ರಧಾನ ಕಾರ್ಯದರ್ಶಿಗಳಾದ ವಿಜಯಕುಮಾರ ಹಳಕಟ್ಟಿ, ಮಂಜು ಕಳಸ್ಕರ್‌, ಅರವಿಂದ ನವಲಿ, ಜಿ.ಡಿ.ಎ. ಮಾಜಿ ಅಧ್ಯಕ್ಷ ವಿದ್ಯಾಸಾಗರ ಕುಲಕರ್ಣಿ, ಸಾವಿತ್ರಿ ಕುಳಗೇರಿ, ಉಮೇಶ ಪಾಟೀಲ ಹಾಗೂ ಉತ್ತರ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next