Advertisement

2023ರಲ್ಲಿ “ಕೈ’ಹಿಡಿಯಲಿದ್ದಾರೆ ಜನತೆ

11:13 AM Mar 23, 2022 | Team Udayavani |

ಚಿಂಚೋಳಿ: ರಾಜ್ಯದಲ್ಲಿ ದುರಾಡಳಿತ ಮತ್ತು ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವುದರಿಂದ ಜನರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನವಿದ್ದು, 2023ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ(ಐ) ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಪಟ್ಟಣದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ ಸಮಾಧಿ ಸ್ಥಳದಲ್ಲಿ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಚಿಂಚೋಳಿ-ಕಾಳಗಿ ವತಿಯಿಂದ ಏರ್ಪಡಿಸಿದ್ದ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರ ಕೋಮು ಗಲಭೆ ಸೃಷ್ಟಿಸುತ್ತಿದೆ. ಅಭಿವೃದ್ಧಿ ಮಾಡದೇ ಕೋವಿಡ್‌ ಹೆಸರಿನಲ್ಲಿ ಕೋಟ್ಯಂತರ ಹಣ ಲೂಟಿ ಮಾಡುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಿಗಬೇಕಾದ ಅನುದಾನ ಸರಿಯಾಗಿ ಸಿಗುತ್ತಿಲ್ಲ. ಕೇವಲ ಸುಳ್ಳು ಭರವಸೆಗಳನ್ನು ಹೇಳುತ್ತಿದೆ ಎಂದು ಆಪಾದಿಸಿದರು.

ಕಾಂಗ್ರೆಸ್‌ ಮುಖಂಡ ಸುಭಾಷ ರಾಠೊಡ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಎಲ್ಲ ಜಾತಿ, ವರ್ಗಗಳು ಮೆಚ್ಚಿ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಯೊಂದು ಬೂತ್‌ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಎಂದರು.

ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಚಿಂಚೋಳಿ ವಿಧಾನಸಭೆ ಮತಕ್ಷೇತ್ರದ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೋ ಅದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎನ್ನುವ ನಂಬಿಕೆಯಿದೆ. ಹೀಗಾಗಿ ಕಾಂಗ್ರೆಸ್‌ ಪಕ್ಷ ಬಲಪಡಿಸೋಣ ಎಂದು ಹೇಳಿದರು.

Advertisement

ಕಾಂಗ್ರೆಸ್‌ ಮುಖಂಡ ಸುಭಾಷ ರಾಠೊಡ ಮಾತನಾಡಿ, ತಾಲೂಕಿನಲ್ಲಿ ಬಿಜೆಪಿ ಆಡಳಿತ ಸಂಪೂರ್ಣ ವಿಫಲವಾಗಿದೆ. ಶಾಸಕರು, ಸಂಸದರಿಗೆ ಜನರ ಬಗ್ಗೆ ಕಾಳಜಿ ಇಲ್ಲ. ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಮಂಜೂರಿಗೊಳಿಸಿದ ಕೆಲಸಗಳೇ ಈಗಲೂ ನಡೆಯುತ್ತಿವೆ ಎಂದರು. ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಜಗದೇವ ಗುತ್ತೇದಾರ, ರೇವಣಸಿದ್ಧಪ್ಪ ಸಾತನೂರ, ಭೀಮರಾವ್‌ ತೇಗಲತಿಪ್ಪಿ, ಬಸವರಾಜ ಮಲಿ, ರವಿರಾಜ ಕೊರವಿ, ಅನೀಲಕುಮಾರ ಜಮಾದಾರ, ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಮಾತನಾಡಿದರು.

ಪುರಸಭೆ ಉಪಾಧ್ಯಕ್ಷ ಶಬ್ಬೀರ ಅಹೆಮದ್‌, ಗೋಪಾಲರಾವ್‌ ಕಟ್ಟಿಮನಿ, ಮಹಾಂತಪ್ಪ ಸಂಗಾವಿ, ಮಲ್ಲಿಕಾರ್ಜುನ ಹುಳಗೇರಾ, ರವೂಫ ಮಿರಿಯಾಣ, ಜಗನ್ನಾಥ ಕಟ್ಟಿ,ಬಾಸೀತ, ಸಿದ್ಧಪ್ಪ ಪೂಜಾರಿ, ಸಂತೋಷ ಗುತ್ತೇದಾರ, ಗೋಪಾಲರೆಡ್ಡಿ ಕಸ್ತೂರಿ, ಸುದರ್ಶನರೆಡ್ಡಿ ಕಲ್ಲೂರ, ವೀರಶೆಟ್ಟಿ ಪಾಟೀಲ, ಪ್ರಭುಲಿಂಗ ಲೇವಡಿ ಇನ್ನಿತರರಿದ್ದರು.

ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷ ಬಸವರಾಜ ಮಲಿ ಸ್ವಾಗತಿಸಿದರು, ಶರಣು ಮೋತಕಪಳ್ಳಿ ನಿರೂಪಿಸಿದರು, ಅನಿಲಕುಮಾರ ಜಮಾದಾರ ವಂದಿಸಿದರು. ಕುಂಚಾವರಂ, ಮಿರಿಯಾಣ, ಚಂದನಕೇರಾ, ಚಿಮ್ಮನಚೋಡ, ಐನಾಪುರ, ಶಾದಿಪುರ, ವೆಂಕಟಾಪುರ, ಐನೋಳಿ, ದೇಗಲಮಡಿ, ಸಾಲೇಬೀರನಳ್ಳಿ ಇನ್ನಿತರ ಗ್ರಾಮಗಳಿಂದ ಕಾಂಗ್ರೆಸ್‌ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next