Advertisement

ವಿಶ್ವಸಂಸ್ಥೆಯಲ್ಲಿ ಮಹಾತ್ಮಾ ಗಾಂಧಿ ಹೋಲೋಗ್ರಾಂ ಪ್ರದರ್ಶನ

07:51 PM Oct 01, 2022 | Team Udayavani |

ನ್ಯೂಯಾರ್ಕ್‌:  ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹೋಲೋಗ್ರಾಂ ಅನ್ನು ವಿಶ್ವಸಂಸ್ಥೆಯಲ್ಲಿ ಪ್ರದರ್ಶಿಸಲಾಗಿದೆ. ಅಂತಾರಾಷ್ಟ್ರೀಯ ಅಹಿಂಸಾ ದಿನ ನಿಮಿತ್ತ ಅದನ್ನು ಪ್ರದರ್ಶಿಸಸಲಾಗಿದೆ.

Advertisement

ಕೂತಿರುವ, ನಿಂತಿರುವ ಭಂಗಿಯಲ್ಲಿ ಒಟ್ಟು ಮೂರು ಬಾರಿ ಗಾಂಧಿ ಅವರನ್ನು ಪ್ರಸ್ತುತ ಪಡಿಸಲಾಗಿದೆ. ಶಾಂತಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಯುನೆಸ್ಕೋದ ಮಹಾತ್ಮಾ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಎಜುಕೇಶನ್‌ ಹಾಗೂ ವಿಶ್ವಸಂಸ್ಥೆಗೆ ಭಾರತದ ಖಾಯಂ ಮಿಷನ್‌ ಜಂಟಿಯಾಗಿ ಈ ಕಾರ್ಯಕ್ರಮ ಆಯೋಜಿಸಿದ್ದವು. ಮಹಾತ್ಮಾ ಗಾಂಧಿ ಜನ್ಮದಿನ ಪ್ರಯುಕ್ತ ಅಂತಾರಾಷ್ಟ್ರೀಯ ಅಹಿಂಸಾ ದಿನ ಆಚರಿಸಲು ವಿಶ್ವಸಂಸ್ಥೆಯಲ್ಲಿ 2007ರಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಾನವೀಯತೆಯ ವೃದ್ಧಿ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಯನ್ನೂ ಆಯೋಜನೆ ಮಾಡಲಾದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next