Advertisement

Covid Case: ದೇಶದಲ್ಲಿ ಒಂದೇ ದಿನ 10,158 ಮಂದಿಗೆ ಸೋಂಕು

10:14 PM Apr 13, 2023 | Team Udayavani |

ನವದೆಹಲಿ: ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ಪೂರ್ಣ ನಿಯಂತ್ರಣಕ್ಕೆ ಬರುತ್ತದೆಂಬ ತಜ್ಞರ ಅಭಿಪ್ರಾಯದ ನಡುವೆಯೇ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಗುರುವಾರ ಒಂದೇ ದಿನದಲ್ಲಿ 10,158 ಮಂದಿಗೆ ಕೊರೊನಾ ದೃಢಪಟ್ಟಿದೆ.

Advertisement

ಇದು ಹಿಂದಿನ ದಿನದ ಪ್ರಕರಣಕ್ಕೆ ಹೋಲಿಸಿದರೆ ಶೇ.30ರಷ್ಟು ಹೆಚ್ಚಾಗಿದೆ. ಸೋಂಕಿತರ ಸಂಖ್ಯೆ ಕುರಿತಾದ ದತ್ತಾಂಶಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದೆ. ಆ ಪ್ರಕಾರ 7,830ರಿಂದ 10,158ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4.42 ಕೋಟಿಗೆ ಏರಿಕೆಯಾಗಿದೆ. ಈ ಪೈಕಿ ಶೇ.0.10ರಷ್ಟು ಸಕ್ರಿಯ ಪ್ರಕರಣಗಳಿವೆ. ನಿತ್ಯ ಪಾಸಿಟಿವಿಟಿ ದರ ಶೇ.4.42ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.4.02ಕ್ಕೆ ತಲುಪಿದೆ.

Advertisement

Udayavani is now on Telegram. Click here to join our channel and stay updated with the latest news.

Next