Advertisement
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಸ್ಥೆಯಲ್ಲಿ ಮಾಹೆ ಸೆಂಟರ್ ಫಾರ್ ವುಮನ್ ಸ್ಟಡೀಸ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜನೆ ಸಮಿತಿ ಆಶ್ರಯದಲ್ಲಿ ಆಚರಿಸಲಾದ ವಿಶ್ವ ಮಹಿಳಾ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ಮಾತನಾಡಿ, ಸಮಾಜದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಮಹಿಳೆಯರ ಜೀವನಾನುಭವ, ಸಮಾಜಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಸಾಧಕತ್ರಯರಾದ ಕ್ರೀಡಾ ಸಾಧಕಿ ಅರುಣಕಲಾ ರಾವ್, ಟ್ರಾಫಿಕ್ ಕಂಟ್ರೋಲರ್ ಸುಶೀಲಾ ಸಾಲ್ಯಾನ್, ಅಂಗನವಾಡಿ ಮತ್ತು ಸಮುದಾಯ ಆರೋಗ್ಯ ಸೇವಕಿ ಶ್ರೀಮತಿ ಹೆಗ್ಡೆ ಅವರನ್ನು ಸಮ್ಮಾನಿಸಲಾಯಿತು. ಸಿಬಂದಿ ವರ್ಗ ಮತ್ತು ವಿದ್ಯಾರ್ಥಿಗಳಿಗೆ ಈ ವರ್ಷದ “ಸರ್ವರೂ ಸಮಾನರು’ ಧ್ಯೇಯ ವಾಕ್ಯದಡಿ ಭಾಷಣ, ಕೊಲಾಜ್ ಸ್ಪರ್ಧೆಯನ್ನು ನಡೆಸಲಾಯಿತು. ಸಮಾರಂಭದಲ್ಲಿ ಸುಮಾರು 800 ಮಂದಿ ಮಹಿಳೆಯರು ಭಾಗವಹಿಸಿದ್ದರು. ಡಾ| ಟಿಎಂಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ಪಾರ್ವತಿ ಭಟ್, ಸಮಾಜ ಸೇವಕಿ ಇಂದಿರಾ ಎಸ್. ಬಲ್ಲಾಳ್, ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಕುಲಪತಿ ಡಾ| ಎಚ್. ವಿನೋದ್ ಭಟ್, ಸಿಂಡಿಕೇಟ್ ಬ್ಯಾಂಕಿನ ವಲಯ ಪ್ರಬಂಧಕ ಭಾಸ್ಕರ ಹಂದೆ ಉಪಸ್ಥಿತರಿದ್ದರು.