Advertisement

ಅಂಕೋಲಾದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ; ಓರ್ವ ಗಂಭೀರ

06:50 PM Jan 01, 2023 | Team Udayavani |

ಅಂಕೋಲಾ : ಕಾರು ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಅವಘಡ ಬಾಳೆಗುಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೊಸ ವರ್ಷದ ದಿನದಂದೆ (ಜನವರಿ 1.ಭಾನುವಾರ) ನಡೆದಿದೆ.

Advertisement

ತಮಿಳುನಾಡು ನೊಂದಣಿ ಹೊಂದಿದ ಕಾರು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಏಕಾಎಕಿ ರಸ್ತೆ ಬಿಟ್ಟು ಡಿವೈಡರ್ ದಾಟಿ ಎದುರಿನಿಂದ ಬರುವ ರಸ್ತೆಗೆ ಸಾಗಿ ಅಲ್ಲಿ ಅಂಕೋಲಾದಿಂದ ಹುಬ್ಬಳ್ಳಿ ಹೋಗುವ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿಯೇ ತಮಿಳುನಾಡು ಮೂಲದ ನಾಲ್ವರು ಸ್ಥಳದಲ್ಲೇ ಮೃತ ಪಟ್ಟಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಗಂಭೀರ ಗಾಯಾಳುವನ್ನು ಕಾರವಾರ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಯಾಣಿಕರ ಮಾಹಿತಿ ತತ್ ಕ್ಷಣಕ್ಕೆ ಲಭ್ಯವಾಗಿಲಿಲ್ಲ. ಸ್ಥಳಕ್ಕೆ ಅಂಕೋಲಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ, ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next