ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಮೇ 16)ರಂದು 71 ಸಾವಿರ ಮಂದಿ ಯುವಕರಿಗೆ ವಿವಿಧ ಸರ್ಕಾರಿ ಇಲಾಖೆಗಳ ನೇಮಕಾತಿ ಪತ್ರಗಳನ್ನು ವಿತರಿಸಿದರು.
ವರ್ಚುವಲ್ ಮೂಲಕ ಮೋದಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ನೇಮಕಾತಿ ಪತ್ರ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು ನೇಮಕಾತಿ ವ್ಯವಸ್ಥೆಯಲ್ಲಿನ ಬದಲಾವಣೆಗಳು ಭ್ರಷ್ಟಚಾರ, ಸ್ವಜನಪಕ್ಷಪಾತವನ್ನು ಕೊನೆಗೊಳಿಸಿವೆ ಎಂದು ಹೇಳಿದರು.
ದೇಶದ ಒಟ್ಟು 45 ಸ್ಥಳಗಳಲ್ಲಿ “ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು. 71 ಸಾವಿರ ಮಂದಿಗೆ ಪ್ರಮಾಣ ಪತ್ರ ವಿತರಿಸಿದ ಬಳಿಕ ಉದ್ಯೋಗಪಡೆದವರ ಒಟ್ಟು ಸಂಖ್ಯೆ 3.6 ಲಕ್ಷ ಮಂದಿಗೆ ಏರಿಕೆಯಾಗಿದೆ.
ದೇಶದಲ್ಲಿ ಅಗತ್ಯ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆ ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಕೇಂದ್ರದ ಪಾಲಿಗೆ ಮಹತ್ವದ ಹೆಜ್ಜೆಯಾಗಿದೆ.
ಕಳೆದ ವರ್ಷದ ಅಕ್ಟೋಬರ್ 22 ರಂದು ಪ್ರಧಾನಿ “ಉದ್ಯೋಗ ಮೇಳ’ ಆರಂಭಿಸಿದ್ದರು.