Advertisement

G20 Summit ಪ್ರಧಾನಿ ಮೋದಿಗೆ ವ್ಲಾದಿಮಿರ್‌ ಪುತಿನ್‌ ದೂರವಾಣಿ ಕರೆ

11:48 PM Aug 28, 2023 | Team Udayavani |

ಹೊಸದಿಲ್ಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರವಾಣಿ ಕರೆ ಮೂಲಕ ಸಂಪರ್ಕಿಸಿ, ಭಾರತದಲ್ಲಿ ನಡೆಯಲಿರುವ ಜಿ-20 ಸಭೆಯಲ್ಲಿ ತಾವು ಭಾಗಿಯಾಗಲು ಸಾಧ್ಯವಾಗದ್ದರ ಬಗ್ಗೆ ತಿಳಿಸಿದ್ದಾರೆ.

Advertisement

ಇದೇ ವೇಳೆ ಚಂದ್ರಯಾನ-3ರ ಯಶಸ್ಸಿಗೆ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿ, ಭಾರತದ ಜತೆಗಿನ ಕಾರ್ಯತಂತ್ರ ಪಾಲುದಾರಿಕೆ ಉತ್ತಮಗೊಳಿಸುವ ಬಗ್ಗೆ ಮಾತನಾಡಿದ್ದಾರೆ. ಈ ಸಂಬಂಧಿಸಿದಂತೆ ಮಾಸ್ಕೋ ಆಡಳಿತ ಪ್ರಕಟನೆ ಹೊರಡಿಸಿದ್ದು, ಸೆಪ್ಟೆಂಬರ್‌ನಲ್ಲಿ ನಡೆಯುತ್ತಿರುವ ಜಿ20 ಶೃಂಗದಲ್ಲಿ ಪುತಿನ್‌ ಪಾಲ್ಗೊಳ್ಳಲು ಅಸಾಧ್ಯವಾಗಿರುವ ಹಿನ್ನೆಲೆ ಮೋದಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದಾರೆ.

ಮಾಸ್ಕೋ ಪರವಾಗಿ ರಷ್ಯಾದ ವಿದೇಶಾಂಗ ಸಚಿವ ಸರ್ಗೆ ಲಾವ್ರೋವ್‌ ಭಾಗವಹಿಸಲಿದ್ದಾರೆ ಎಂಬುದನ್ನೂ ತಿಳಿಸಿದ್ದಾರೆ. ಇದೇ ವೇಳೆ ಮೋದಿ ಮತ್ತು ಪುತಿನ್‌ ಇಂಧನ ಸಂಬಂಧಿತ ಯೋಜನೆ ವ್ಯವಹಾರಗಳನ್ನು ವಿಸ್ತರಿಸುವುದು ಸೇರಿದಂತೆ ವಿವಿಧ ವಿಚಾರಗಳನ್ನು ಚರ್ಚಿಸಿದ್ದಾರೆ ಎಂದಿದೆ. ಇನ್ನು ಪುತಿನ್‌ ಅವರ ಪರಿಸ್ಥಿತಿಯನ್ನು ಅರ್ಥೈಸಿಕೊಂಡ ಪ್ರಧಾನಿ ಮೋದಿ, ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರು ಜಿ20 ಶೃಂಗದ ಎಲ್ಲ ಉಪಕ್ರಮಗಳಿಗೂ ಸಹಕರಿಸಿದ್ದಕ್ಕಾಗಿ ರಷ್ಯಾಗೆ ಧನ್ಯವಾದ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next