Advertisement
ಶಾಶ್ವತವಾಗಿ ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ಲೆಬನಾನ್ ಮೂಲದ ಭಯೋ*ತ್ಪಾದಕ ಸಂಘಟನೆ ಹೆಜ್ಬುಲ್ಲಾ ಮತ್ತು ಇಸ್ರೇಲ್ ಅಮೆರಿಕದ ಉಸ್ತುವಾರಿಯಲ್ಲಿ ಕದನ ವಿರಾಮಕ್ಕೆ ಸಹಮತ ಸೂಚಿಸಿರುವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಂಗಳವಾರ (ನ.26) ಘೋಷಿಸಿದ್ದಾರೆ.
Related Articles
Advertisement
ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಮತ್ತು ಲೆಬನಾನ್ ಪ್ರಧಾನಿ ನಜೀಬ್ ಮಿಕಾಟಿ ಅವರಗೊಂದಿಗೆ ಮಾತುಕತೆ ನಡೆಸಿರುವುದಾಗಿ ಬೈಡನ್ ಪ್ರತಿಕ್ರಿಯೆ ನೀಡಿದ್ದಾರೆ.
ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವೆ ನಡೆಯುತ್ತಿರುವ ಅನಾಹುತಕಾರಿ ಯುದ್ಧವನ್ನು ನಿಲ್ಲಿಸಬೇಕೆಂಬ ಅಮೆರಿಕದ ಪ್ರಸ್ತಾವನೆಯನ್ನು ಇಸ್ರೇಲ್ ಸರ್ಕಾರ ಒಪ್ಪಿರುವುದಾಗಿ ನಾವು ಘೋಷಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ಅವರಿಗೆ ಧನ್ಯವಾದ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.