Advertisement

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

07:07 PM Jan 20, 2022 | Team Udayavani |

ನವದೆಹಲಿ: 2020ರ ಆರಂಭದಲ್ಲಿ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ಪರಿಗಣಿಸಲ್ಪಟ್ಟಿರುವ ದಿನೇಶ್‌ ಯಾದವ್‌ಗೆ ದೆಹಲಿಯ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಐದು ವರ್ಷಗಳ ಜೈಲು ಹಾಗೂ 12 ಸಾವಿರ ರೂ.ಗಳ ದಂಡ ವಿಧಿಸಿದೆ.

Advertisement

ದಿನೇಶ್‌ ಈ ಪ್ರಕರಣದಲ್ಲಿ  ಶಿಕ್ಷೆಗೊಳಗಾದ ಮೊದಲ ಅಪರಾಧಿ.  ಗಲಭೆ ಹಬ್ಬಿಸುವಲ್ಲಿ  ಆತನ ಪಾತ್ರ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿರುವುದಾಗಿ ತೀರ್ಪನ್ನು  ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ವೀರೇಂದ್ರ ಭಟ್‌ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ತಿದ್ದುಪಡಿಯನ್ನು ಮಸೂದೆಯನ್ನು ವಿರೋಧಿಸಿ ನಡೆದಿದ್ದ ಈ ಗಲಭೆಯಲ್ಲಿ 50ಕ್ಕೂ ಹೆಚ್ಚು ಜನರು ಸಾವಿಗೀಡಾಗಿ, ನೂರಾರು ಜನರು ಗಾಯಗೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next