Advertisement

ಹಾಸನ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ 299ಕ್ಕೇರಿಕೆ

07:18 AM Jun 24, 2020 | Lakshmi GovindaRaj |

ಹಾಸನ: ಜಿಲ್ಲೆಯಲ್ಲಿ ಒಬ್ಬ ಪೊಲೀಸ್‌ ಸಿಬ್ಬಂದಿ ಸೇರಿ ಮಂಗಳವಾರ 7 ಮಂದಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ 299ಕ್ಕೆ ಏರಿದೆ.

Advertisement

ಆ ಪೈಕಿ ಚನ್ನರಾಯಪಟ್ಟಣ ತಾಲೂಕಿನ ಪಾಲು  200. ಪೊಲೀಸ್‌ ಪೇದೆಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಹಾಸನದ ಕೆ.ಆರ್‌. ಪುರಂ ಬಡಾವಣೆ ಪೊಲೀಸ್‌ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದ್ದು, ಪೊಲೀಸ್‌ ಠಾಣೆಗೆ ರಾಸಾಯನಿಕ ಸಿಂಪಡಿಸಲಾಗಿದೆ. ಸೋಂಕಿತ ಪೊಲೀಸ್‌  ಸಿಬ್ಬಂ ದಿಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗು ತ್ತಿದೆ. ಪೊಲೀಸ್‌ ಸಿಬ್ಬಂದಿ ಬೆಂಗಳೂರಿನ ತನ್ನ ಸಂಬಂಧಿಕರ ಗೃಹ ಪ್ರವೇಶಕ್ಕೆ ಹೋಗಿ ಬಂದ ನಂತರ ಕೋವಿಡ್‌ 19 ಸೋಂಕು ಕಾಣಿಸಿಕೊಂಡಿದೆ.

ಇನ್ನುಳಿದಂತೆ 5 ಮಂದಿಗೆ ಮುಂಬೈ  ಪ್ರಯಾಣದ ಹಿನ್ನೆಲೆ ಇದ್ದರೆ ಮತ್ತೂಬ್ಬರಿಗೆ ಬೆಂಗಳೂರು ಪ್ರಯಾಣದ ಹಿನ್ನೆಲೆಯಿಂದ ಕೋವಿಡ್‌ 19 ಸೋಂಕು ಕಾಣಿಸಿಕೊಂಡಿದೆ. ಸೋಂಕಿತರೆಲ್ಲರೂ ಹಾಸನದ ಕೋವಿಡ್‌ 19 ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಮಂಗಳವಾರ 4 ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ 215 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 83 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next