Advertisement
ಮಹಾರಾಷ್ಟ್ರ ವಿಧಾನ ಭವನದ ಕಾರ್ಯದರ್ಶಿ ರಾಜೇಂದ್ರ ಭಾಗವತ್ ಪಿಟಿಐಗೆ ನೀಡಿರುವ ಮಾಹಿತಿ ಪ್ರಕಾರ, ಕಳೆದ ಎರಡು ದಶಕಗಳ ಅವಧಿಯಲ್ಲಿ ಸಂಪ್ರದಾಯದಂತೆ ಮೊದಲು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿ ನಂತರ ಉಳಿದ ಶಾಸಕರು ಪ್ರಮಾಣವಚನ ಸ್ವೀಕರಿಸುತ್ತಿದ್ದರು.
Related Articles
Advertisement
ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ಬುಧವಾರ ಬೆಳಗ್ಗೆ 8ಗಂಟೆಗೆ ಆರಂಭವಾಗಿದ್ದು, ಸದನದಲ್ಲಿ 288 ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರು. ಹಂಗಾಮಿ ಸ್ಪೀಕರ್ ಕಾಳಿದಾಸ್ ಕೋಳಂಬ್ಕರ್ ಪ್ರತಿಜ್ಞಾವಿಧಿ ಬೋಧಿಸಿದ್ದರು. ಅಜಿತ್ ಪವಾರ್, ಚಗನ್ ಭುಜ್ ಬಲ್, ಅಶೋಕ್ ಚವಾಣ್ ಮತ್ತು ಪ್ರಥ್ವಿರಾಜ್ ಚವಾಣ್ ಸೇರಿದಂತೆ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರು.
ಮಹಾರಾಷ್ಟ್ರದಲ್ಲಿನ ನಾಟಕೀಯ ರಾಜಕೀಯ ಬೆಳವಣಿಗೆಯಿಂದಾಗಿ ಚುನಾವಣಾ ಫಲಿತಾಂಶ ಘೋಷಣೆಯಾದ ಒಂದು ತಿಂಗಳವರೆಗೂ ನೂತನವಾಗಿ ಆಯ್ಕೆಯಾದ ಶಾಸಕರು ಪ್ರಮಾಣವಚನ ಸ್ವೀಕರಿಸಿರಲಿಲ್ಲವಾಗಿತ್ತು. ಅಲ್ಲದೇ ಯಾವುದೇ ಪಕ್ಷಗಳು ಸರ್ಕಾರ ರಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ನವೆಂಬರ್ 12ರಿಂದ 23ರವರೆಗೆ ರಾಷ್ಟ್ರಪತಿ ಆಡಳಿತ ಜಾರಿಯಾಗಿತ್ತು.
ಎನ್ ಸಿಪಿ ಮುಖಂಡ ಅಜಿತ್ ಪವಾರ್ ಬೆಂಬಲದೊಂದಿಗೆ ನ.23ರಂದು ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮಂಗಳವಾರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರಿಂದ ಸರ್ಕಾರ ಪತನವಾಗಿತ್ತು.
ಸೋಮವಾರ ರಾಜ್ಯಪಾಲರನ್ನು ಭೇಟಿಯಾಗಿದ್ದ ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ 162 ಶಾಸಕರ ಬೆಂಬಲ ಇರುವ ಬಗ್ಗೆ ಶಾಸಕರ ಸಹಿಯುಳ್ಳ ಪತ್ರವನ್ನು ನೀಡಿತ್ತು. ಅಲ್ಲದೇ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಎಂದು ಎನ್ ಸಿಪಿ ಘೋಷಿಸಿತ್ತು.