ಕಾರಿನಲ್ಲಿದ್ದ ಬಲಮುರಿ ಗ್ರಾಮದ ಚೆಯ್ಯಂಡ ಕವಿತಾ(45) ಹಾಗೂ ಅವರ ಪುತ್ರ ಹತ್ತನೇ ತರಗತಿಯ ವಿದ್ಯಾರ್ಥಿ ಆರ್ಯನ್ (15) ಮೃತ ದುರ್ದೈವಿಗಳು. ಪತಿ ಚೆಯ್ಯಂಡ ಕಟ್ಟಿ ಮುತ್ತಪ್ಪ ಅವರಿಗೆ ಗಾಯಗಳಾಗಿದ್ದು, ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಕಾರು ಮತ್ತು ಟಾಟಾ ಏಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಟ್ಟಿ ಮುತ್ತಪ್ಪ, ಕವಿತಾ ಹಾಗೂ ಆರ್ಯನ್ ಮಾ.23 ರಂದು ನಾಪೋಕ್ಲುವಿನಲ್ಲಿ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವದಲ್ಲಿ ಪಾಲ್ಗೊಂಡು ಇಂದು ಕಾರಿನಲ್ಲಿ ಬೆಂಗಳೂರಿಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇವರಿಗೆ ಪುತ್ರಿಯೂ ಇದ್ದು, ಬೆಂಗಳೂರಿನಲ್ಲೇ ಉಳಿದುಕೊಂಡ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಕಟ್ಟಿ ಮುತ್ತಪ್ಪ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದಾರೆ. ಬಲಮುರಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.