Advertisement

ಧೂಳೀಪಟ: ಗುಜರಾತ್ ನಲ್ಲಿ ಕಾಂಗ್ರೆಸ್ ಗೆ ವಿಪಕ್ಷ ನಾಯಕನ ಸ್ಥಾನವೂ ಇಲ್ಲ!

06:01 PM Dec 08, 2022 | Team Udayavani |

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಿದ್ದು, 182 ಕ್ಷೇತ್ರಗಳಲ್ಲಿ ಕೇವಲ 16 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಇದರೊಂದಿಗೆ ಕಾಂಗ್ರೆಸ್ ವಿಪಕ್ಷ ನಾಯಕನ ಸ್ಥಾನವನ್ನೂ ಕಳೆದುಕೊಳ್ಳುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ʼಖಾಕಿʼ ವೆಬ್ ಸಿರೀಸ್: ಮೂಲ ಕಥೆ ಬಳಸಿಕೊಳ್ಳಲು ಲಕ್ಷಾಂತರ ರೂ. ಡೀಲ್‌ ಆರೋಪ: ಐಪಿಎಸ್‌ ಅಧಿಕಾರಿ ವಿರುದ್ಧ ದೂರು ದಾಖಲು

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ಪಡೆಯಲು ಕಾಂಗ್ರೆಸ್ ಗೆ ಕನಿಷ್ಠ ಶೇ.10ರಷ್ಟು ಪ್ರತಿಶತ ಶಾಸಕರು (ಕನಿಷ್ಠ 18) ಗೆಲ್ಲಬೇಕಾದ ಅಗತ್ಯವಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು, ಪ್ರತಿಪಕ್ಷ ನಾಯಕನ ಸ್ಥಾನ ಪಡೆಯಲು ಬೇಕಾದ ಶಾಸಕರ ಬಲವನ್ನೂ ಕಳೆದುಕೊಂಡಿದೆ.

2017ರಲ್ಲಿ ಭಾರತೀಯ ಜನತಾ ಪಕ್ಷ 99 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಿತ್ತು. ಕಾಂಗ್ರೆಸ್ ಪಕ್ಷ 77 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಪ್ರಬಲ ಪ್ರತಿಪಕ್ಷವಾಗಿ ಹೊರಹೊಮ್ಮಿತ್ತು. ವಿಪರ್ಯಾಸವೆಂದರೆ 2022ರ ಚುನಾವಣೆಯಲ್ಲಿ ಕಳೆದ ಬಾರಿ ಗೆಲುವು ಸಾಧಿಸಿದ 77 ಸ್ಥಾನಗಳ ಪೈಕಿ 62 ಕ್ಷೇತ್ರಗಳಲ್ಲಿ ಪರಾಜಯಗೊಂಡು, ಕೇವಲ 16 ಸ್ಥಾನಗಳಲ್ಲಷ್ಟೇ ಜಯ ಸಾಧಿಸಿ ಮುಖಭಂಗಕ್ಕೀಡಾಗಿದೆ.

2014, 2019ರ ಚುನಾವಣಾ ಫಲಿತಾಂಶದ ನಂತರ ಲೋಕಸಭೆಯಲ್ಲೂ ಕೂಡಾ ಕಾಂಗ್ರೆಸ್ ವಿಪಕ್ಷ ನಾಯಕನ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ 2014ರಲ್ಲಿ ಕೇವಲ 44 ಸ್ಥಾನ ಗಳಿಸಿದ್ದು, 2019ರಲ್ಲಿ 52 ಸ್ಥಾನಗಳಲ್ಲಷ್ಟೇ ಗೆಲುವು ಸಾಧಿಸಿತ್ತು. ಆದರೂ ಕಾಂಗ್ರೆಸ್ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲು ಪ್ರಯತ್ನಿಸಿತ್ತು. ಆಗ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ನಿಯಮಗಳ ಅನ್ವಯ ಲೋಕಸಭೆಯ ವಿಪಕ್ಷ ನಾಯಕರಾಗಲು 55 ಸ್ಥಾನಗಳ ಅಗತ್ಯವಿದೆ ಎಂದು ಹೇಳಿ ಕಾಂಗ್ರೆಸ್ ಪ್ರಯತ್ನಕ್ಕೆ ಅಂಕುಶ ಹಾಕಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next