Advertisement

ಶಾಸಕರನ್ನು ತಡೆಯಲು ಹೂಡಿರುವ ಷಡ್ಯಂತ್ರ

04:34 AM Jul 14, 2019 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್‌, ಜೆಡಿಎಸ್‌ ಶಾಸಕರು ಪಕ್ಷ ಬಿಟ್ಟು ಹೋಗುವುದನ್ನು ತಡೆಯಲು ಮುಖ್ಯಮಂತ್ರಿಗಳು ಮಾಡಿರುವ ವ್ಯವಸ್ಥಿತ ರಾಜಕೀಯ ಷಡ್ಯಂತ್ರವಿದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕಿಡಿ ಕಾರಿದರು.

Advertisement

ನಗರದ ಡಾಲರ್ ಕಾಲೋನಿಯ ತಮ್ಮ ನಿವಾಸದ ಬಳಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ. ಹೀಗಾಗಿ, ವಿಶ್ವಾಸಮತ ಯಾಚಿಸುವುದರಲ್ಲಿ ಅರ್ಥವೇ ಇಲ್ಲ. ಸದ್ಯದ ವಾತಾವರಣ ಬಿಜೆಪಿಗೆ ಅನುಕೂಲಕರವಾಗಿದೆ. ಆದರೂ ವಿಶ್ವಾಸಮತ ಯಾಚಿಸುವ ಧೈರ್ಯವನ್ನು ಸಿಎಂ ಮಾಡಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ. ಸರ್ಕಾರ ಕೆಲವೇ ದಿನಗಳಲ್ಲಿ ಬೀಳುವುದು ಖಚಿತ ಎಂದು ವಿಶ್ವಾಸದಿಂದ ನುಡಿದರು.

ನಾವು ನೋಡಿದ ಡಿಕೆಶಿ ಬೇರೆ: ಮಾಜಿ ಸಚಿವ ವಿ.ಸೋಮಣ್ಣ ಮಾತನಾಡಿ, ಸಚಿವ ಡಿ.ಕೆ.ಶಿವಕುಮಾರ್‌ ಅವರು ಒನ್‌ ಮ್ಯಾನ್‌ ಆರ್ಮಿ. ಆದರೆ, ನಾವು ನೋಡಿದ ಡಿಕೆಶಿಯೇ ಬೇರೆ. ಎರಡು- ಮೂರು ದಿನಗಳಿಂದ ನಡೆದುಕೊಳ್ಳುತ್ತಿರುವ ಡಿಕೆಶಿಯೇ ಬೇರೆ.

ತಮ್ಮ ಪಕ್ಕದಲ್ಲೇ ವಿಡಿಯೋ ಇಟ್ಕೊಂಡು ಅದನ್ನು ಕಳಿಸಬೇಕಾದವರಿಗೆಲ್ಲಾ ಕಳಿಸುತ್ತಾ ಕುಳಿತಿದ್ದಾರೆ. ಡಿ.ಕೆ.ಶಿವಕುಮಾರ್‌ ಯಾಕೆ ಹೀಗೆ ಮಾಡುತ್ತಿದ್ದಾರೆ ಎನ್ನುವುದು ನಮಗೆ ಗೊತ್ತು. ಮಾಹಿತಿ ಇಲ್ಲದೆ ನಾನೇನೂ ಮಾತನಾಡುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next