Advertisement

5ಗ್ಯಾರಂಟಿ ಯೋಜನೆಗೆ ತಾತ್ವಿಕ ಒಪ್ಪಿಗೆ ಮಾತ್ರ; ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಜಾರಿ

04:31 PM May 20, 2023 | Team Udayavani |

ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ಘೋಷಿಸಿದಂತೆ, ಸರ್ಕಾರಕ್ಕೆ ಹೆಚ್ಚುವರಿ ಸಾಲದ ಹೊರೆಯಾಗದಂತೆ ಎಲ್ಲಾ ಐದು ಗ್ಯಾರಂಟಿ ಘೋಷಣೆಗಳನ್ನು ಜಾರಿ ಮಾಡುತ್ತಿದ್ದೇವೆ. ಇಂದು ತಾತ್ವಿಕ ಒಪ್ಪಿಗೆ ಸಿಕ್ಕಿದೆ, ಮುಂದಿನ ಕ್ಯಾಬಿನೆಟ್ ಸಭೆಯ ಬಳಿಕ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಮೊದಲ ಕ್ಯಾಬಿನೆಟ್ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರಿಗೆ ಹೇಳಿದ್ದಂತೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಜಾರಿಗೆ ತಂದಿದ್ದೇವೆ. ಹಿಂದೆಯೂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.

ಐದು ಗ್ಯಾರಂಟಿ ಯೋಜನೆ ಈಡೇರಿಕೆಗೆ ರಾಜ್ಯದಲ್ಲಿ ಒಂದು ಲೆಕ್ಕಾಚಾರದ ಪ್ರಕಾರ 50 ಸಾವಿರ ಕೋಟಿ ರೂ ಬೇಕಾಗುತ್ತದೆ. ರಾಜ್ಯದ ಬಜೆಟ್ ಮೂರು ಲಕ್ಷದ ಹತ್ತು ಸಾವಿರ ಕೋಟಿ ರೂ. ತೆರಿಗೆ ಕಟ್ಟುನಿಟ್ಟಾಗಿ ಸಂಗ್ರಹ ಮಾಡುವ ಮೂಲಕ ಹೆಚ್ಚಿಸಬಹುದು ಎಂದರು.

ಇದನ್ನೂ ಓದಿ:ನನ್ನನ್ನು ಒಬ್ಬ ನಟಿಯಾಗಿ ಮಾತ್ರ ನೋಡಿ: ಪವಿತ್ರಾ ಲೋಕೇಶ್‌ ನೇರ ಮಾತು

ಪ್ರಣಾಳಿಕೆಯಲ್ಲಿ ಇನ್ನೂ ಹಲವು ಭರವಸೆ ನೀಡಿದ್ದೆವು. ಇವೆಲ್ಲವೂ ಒಂದೇ ವರ್ಷದಲ್ಲಿ ಇಡೇರಿಸುವುದಲ್ಲ. ಐದು ವರ್ಷದ ಅವಧಿಯಲ್ಲಿ ಈಡೇರಿಕೆ ಮಾಡುವಂತದ್ದು ಎಂದರು.

Advertisement

ಐದು ಯೋಜನೆಗಳು

ಗೃಹಲಕ್ಷ್ಮಿ: ಮನೆಯೊಡತಿಗೆ ಮಾಸಿಕ 2 ಸಾವಿರ ರೂ.

ಗೃಹಜ್ಯೋತಿ: 200 ಯುನಿಟ್ ವರೆಗೆ ಉಚಿತ ವಿದ್ಯುತ್

ಅನ್ನ ಭಾಗ್ಯ: ಬಿಪಿಎಲ್ ಕಾರ್ಡುದಾರರಿಗೆ ಮನೆಯ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ಉಚಿತ

ಯುವನಿಧಿ: ಈ ವರ್ಷದ ಪದವೀಧರರಿಗೆ ನಿರೋದ್ಯೋಗಿಯಾಗಿರುವವರಿಗೆ ಮಾಸಿಕ 3000 ರೂ. ಡಿಪ್ಲೋಮಾ ಪಾಸ್ ಆದವರಿಗೆ 1500 ರೂ. (ಎರಡು ವರ್ಷದವರೆಗೆ)

ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ. ಫ್ರೀ ಬಸ್ ಪಾಸ್ ನೀಡಲಾಗುವುದು.

Advertisement

Udayavani is now on Telegram. Click here to join our channel and stay updated with the latest news.