Advertisement

ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.11 ಇದ್ದು, ಶೇ.5ಕ್ಕೆ ಬಂದರೆ ಅನ್ ಲಾಕ್ : ಸಿಎಂ BSY

06:55 PM Jun 04, 2021 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದ್ದು, ಸದ್ಯ 11.09 ರಷ್ಟಿದೆ. ಈ ಪಾಸಿಟಿವಿಟಿ ದರ ಶೇ.5ಕ್ಕೆ ಬಂದರೆ ರಾಜ್ಯದಲ್ಲಿ ಅನ್ ಲಾಕ್ ಮಾಡುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

Advertisement

ಇಲ್ಲಿನ ಸವಾಯಿ ಗಂಧರ್ವ ಹಾಲಿನಲ್ಲಿ ಕೋವಿಡ್ ನಿಯಂತ್ರಣದ ಕುರಿತು ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞರ ಅಭಿಪ್ರಾಯದಂತೆ ಪಾಸಿಟಿವಿಟಿ ದರ ಶೇ.5 ಕ್ಕಿಳಿದರೆ ಅನ್ ಲಾಕ್ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದಕ್ಕೆ ಜನರು ಕೂಡ ಕೈ ಜೋಡಿಸಬೇಕು ಎಂದರು.

ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಿಸುವ ಕಾರಣಕ್ಕೆ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲು ಮಾಡುವಂತೆ ಸೂಚಿಸಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಮಾಡಿದರೆ ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಣಕ್ಕೆ ಬರಲಿದೆ‌. ಜಿಲ್ಲೆಯಲ್ಲಿ ಇಲ್ಲಿನ ಜಿಲ್ಲಾಡಳಿತ ಕೋವಿಡ್ ನಿಯಂತ್ರಣದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದೆ, ಪ್ರತಿ ತಾಲೂಕಿಗೆ ಮೂರು ಅಂಬ್ಯುಲೆನ್ಸ್ ನೀಡಿದ್ದಾರೆ. ಹಳ್ಳಿಗಳಲ್ಲಿ ಕೋವಿಡ್ ಕೇರ್ ಗಳನ್ನು ತೆರೆದು ಚಿಕಿತ್ಸೆ ಕೊಡಲಾಗುತ್ತಿದೆ. ಜಿಲ್ಲೆಯಲ್ಲಿ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ದತೆ ಮಾಡಿಕೊಂಡಿದ್ದಾರೆ ಎಂದರು.

ಇದನ್ನೂ ಓದಿ :ಸಚಿವರಾಗಿದ್ದಾಗ ನೇಕಾರರಿಗೆ ನೀವೇನು ಮಾಡಿದ್ದೀರಿ ? ಉಮಾಶ್ರೀ ವಿರುದ್ಧ ಹರಿಹಾಯ್ದ ಶಾಸಕ ಸವದಿ

ದೆಹಲಿಯಿಂದ ಈಗಾಗಲೇ ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಗೆ 9 ಸಾವಿರ ಅಂಪೋಟೆರಿಸನ್ ಬಿ ಔಷಧಿ ಬಂದಿದ್ದು, ಅದನ್ನು ಎಲ್ಲಾ ಜಿಲ್ಲೆಗೂ ಅಗತ್ಯೆ ಮೇರೆಗೆ ಹಂಚಿಕೆ ಮಾಡಲಾಗುವುದು. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

Advertisement

ಮೈಸೂರು ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರ ಗೊಂದಲ ನನ್ನ ಗಮನಕ್ಕೆ ಬಂದಿದೆ. ಸಂಜೆಯೊಳಗೆ . ಈ ಸಮಸ್ಯಗೆ ಬಗೆಹರಿಸುವ ಕೆಲಸ ಮಾಡುತ್ತೇನೆ. ರೆಮ್ ಡಿಸಿವರ್ ಹಾಗೂ ಅಂಪೋಟೆರಿಸನ್ ಬಿ ಔಷಧಿ ಅಕ್ರಮ ಮಾರಾಟ ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ, ಗೃಹ ಸಚಿವ ಬಸವರಾಜ ಬೊಮ್ಮಾಯಿ , ಆರೋಗ್ಯ ಸಚಿವ ಡಾ‌.ಕೆ‌‌.ಸುಧಾಕರ, ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಸಚಿವ ಸಿ.ಸಿ.ಪಾಟೀಲ ಸೇರಿದಂತೆ ಇನ್ನಿತರರಿದ್ದರು. .

Advertisement

Udayavani is now on Telegram. Click here to join our channel and stay updated with the latest news.

Next