Advertisement

ವಲಸೆ ಕಾರ್ಮಿಕರ ವಿಚಾರದಲ್ಲಿ ಪಾಲಿಕೆ ಎಡವಟ್ಟು: ಹೈ ಬೇಸರ

07:09 AM Apr 29, 2020 | mahesh |

ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಗರದಲ್ಲಿರುವ ನಿರ್ಗತಿಕರು, ವಲಸೆ ಕಾರ್ಮಿಕರು ಇನ್ನಿತರ ದುರ್ಬಲ ವರ್ಗದ ಜನರನ್ನು ಪತ್ತೆ ಹಚ್ಚುವಲ್ಲಿ ಬಿಬಿಎಂಪಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದು ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ. ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು. ಲಾಕ್‌ಡೌನ್‌ನಿಂದ ನಗರದಲ್ಲಿ ಸಂಕಷ್ಟಕ್ಕೀಡಾಗಿರುವ ಬಡವರನ್ನು ಗುರುತಿಸಿ ಊಟ ವಸತಿ ಹಾಗೂ ಆರೋಗ್ಯ ತಪಾಸಣೆ ನಡೆಸಿ ವರದಿ ಸಲ್ಲಿಸುವಂತೆ ಪಾಲಿಕೆಯ 8 ವಲಯಗಳ ಜಂಟಿ ಆಯುಕ್ತರಿಗೆ ಹೈಕೋರ್ಟ್‌ ಕಳೆದ ಶುಕ್ರವಾರ ನಿರ್ದೇಶಿಸಿತ್ತು.

Advertisement

ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ ಬಿಬಿಎಂಪಿ ಪರವಾಗಿ ಸರ್ಕಾರಿ ವಕೀಲರು ಸಲ್ಲಿಸಿದ ವರದಿ ಗಮನಿಸಿದ ಪೀಠ, ಜಂಟಿ ಆಯುಕ್ತರ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಪಾಲಿಕೆಗೆ ಸೂಚಿಸಿದ್ದರೂ ಮಾರ್ಷಲ್‌ ಗಳಿಂದ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲಾಗಿದೆ. ಆ ವರದಿಯೂ ಅಸಮರ್ಪಕವಾಗಿದೆ ಎಂದು ಬಿಬಿಎಂಪಿ ಬಗ್ಗೆ ಅಸಮಾಧಾನ ಹೊರಹಾಕಿತು. ನಿರಾಶ್ರಿತರು, ವಲಸೆ ಕಾರ್ಮಿಕರನ್ನು ಪತ್ತೆ ಹಚ್ಚಿ ಅವರಿಗೆ ಊಟ ವಸತಿ ಒದಗಿಸುವ ಕುರಿತು ನಗರಾಭಿವೃದಿಟಛಿ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ಪಾಲಿಸಿ ಆ ಕುರಿತು ಕೋರ್ಟ್‌ಗೆ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದ ಪೀಠ, ಅರ್ಜಿ ವಿಚಾರಣೆಯನ್ನು ಮೇ5ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next