Advertisement
ಈ ಸಂಬಂಧದ ಪ್ರಕರಣದ ವಿಚಾರಣೆ ವೇಳೆ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ, “ನಗರ ವ್ಯಾಪ್ತಿಯಲ್ಲಿರುವ ಹೆದ್ದಾರಿಗಳನ್ನು ಡಿನೋಟಿಫೈ ಮಾಡುವ ಸಂಬಂಧ ರಾಜ್ಯಸರ್ಕಾರ ಸಲ್ಲಿಸಿರುವ ಪ್ರಸ್ತಾವನೆ ಕೇಂದ್ರ ಕಾನೂನು ಸಚಿವಾಲಯ ಪರಿಶೀಲಿಸುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದಿಂದ ಪೂರ್ಣ ವಿವರಣೆ ದೊರೆತ ನಂತರ ಕೇಂದ್ರದ ನಿಲುವು ತಿಳಿಸಲಾಗುತ್ತದೆ,’ ಎಂಬ ಅಂಶಗಳನ್ನೊಳಗೊಂಡ ಜ್ಞಾಪನಾಪತ್ರವನ್ನು ನ್ಯಾ. ವಿನೀತ್ ಕೊಠಾರಿ ಅವರ ನ್ಯಾಯಪೀಠಕ್ಕೆ ಸಲ್ಲಿಸಿದರು.
ನಗರ ಪ್ರದೇಶಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಡಿನೋಟಿಫೈ ಮಾಡಿದೆ. ಸ್ಥಳೀಯ ಪ್ರಾಧಿಕಾರಿಗಳು ನಿರ್ವಹಣೆ ಮಾಡುತ್ತಿರುವ ರಸ್ತೆಗಳನ್ನು ರಾಜ್ಯ ಸರ್ಕಾರ ಡಿನೋಟಿಫೈ ಮಾಡಿದೆ. ಕಂದಾಯ ಇಲಾಖೆಯ ದಾಖಲೆಗಳ ಪ್ರಕಾರ ಇನ್ನೂ ಹೆದ್ದಾರಿ ಎಂದೇ ಗುರುತಿಸಲ್ಪಟ್ಟಿರುವ ರಾಷ್ಟ್ರೀಯ ಹೆದ್ದಾರಿ-4 ಹಾಗೂ ರಾಷ್ಟ್ರೀಯ ಹೆದ್ದಾರಿ- 77 ಕೇಂದ್ರ ಸರ್ಕಾರದ ಡಿನೋಟಿಫೈ ಅಧಿಸೂಚನೆಯಲ್ಲಿ ಉಲ್ಲೇಖೀಸಲಾಗಿಲ್ಲ.
Related Articles
Advertisement