Advertisement

‘ಕೌಟುಂಬಿಕ ವಲಯದಲ್ಲಿ ಹೆಣ್ಣಿನ ಪಾತ್ರ ಅಮೂಲ್ಯ’

12:42 PM May 10, 2018 | |

ಮಹಾನಗರ: ಕೌಟುಂಬಿಕ ವಲಯದಲ್ಲಿರುವ ವ್ಯಕ್ತಿಗಳಿಗೆ ಹೆಣ್ಣು ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ನಾದಿನಿಯಾಗಿ, ಅತ್ತಿಗೆಯಾಗಿ, ಅತ್ತೆಯಾಗಿ, ಗೆಳತಿಯಾಗಿ, ಪ್ರೇಮಿಯಾಗಿ ಆಕೆ ನಿರ್ವಹಿಸುವ ಪಾತ್ರಗಳು ಅದ್ಭುತ ಹಾಗೂ ವರ್ಣನಾತೀತ ಎಂದು ಸಾಹಿತಿ ಶಹನಾಝ್ಎಂ. ಪಾಂಡೇಶ್ವರ್‌ ಅವರು ಹೇಳಿದರು.

Advertisement

ಉರ್ವಸ್ಟೋರ್‌ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರಗಿದ ‘ಸಂತೃಪ್ತ ಮಹಿಳೆ ‘ ಎಂಬ ವಿಚಾರದ ಕುರಿತ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹೆಣ್ಣು, ಗಂಡು ಇಬ್ಬರೂ ಬದುಕಿನ ಬಂಡಿಯ ಎರಡು ಚಕ್ರಗಳಿದ್ದಂತೆ. ಇಂದಿನ ದಿನಗಳಲ್ಲಿ ಮಹಿಳೆ ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರೂ ಆಕೆಯ ಮೇಲಿನ ದೌರ್ಜನ್ಯ ಕಡಿಮೆಯಾಗಿಲ್ಲ. ಸ್ತ್ರೀ ನಾಲ್ಕು ಗೋಡೆಗಳ ನಡುವೆ ಕಾಲಕಳೆಯುವ ಕಾಲವೀಗ ಕಣ್ಮರೆಯಾಗಿ, ಪುರುಷ ಪ್ರಧಾನ ಸಮಾಜದಲ್ಲಿ ಪುರುಷರಷ್ಟೇ ಶ್ರೀಮಂತಿಕೆಯಿಂದ ಬದುಕಲು ಸಾಧ್ಯವಿದೆಯೆಂದು ಹಲವಾರು ರೀತಿಯ ಸಾಧನೆಗಳನ್ನು ಮಾಡುವುದರ ಮೂಲಕ ತೋರಿಸಿಕೊಟ್ಟಿದ್ದಾಳೆ. ಎಲ್ಲ ಕ್ಷೇತ್ರದಲ್ಲೂ ಮುನ್ನಡೆಯುತ್ತಾ ಜಗತ್ತಿನ ದೃಷ್ಟಿಯನ್ನು ತನ್ನೆಡೆ ಸೆಳೆದಿದ್ದಾಳೆ ಎಂದರು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಯಶವಂತ್‌ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ರಶ್ಮಿ ಸಿ. ಕರ್ಕೇರ ಅಧ್ಯಕ್ಷತೆ ವಹಿಸಿದ್ದರು.

 ಮಾಜಿ ಅಧ್ಯಕ್ಷರಾದ ವಿದ್ಯಾ ರಾಕೇಶ್‌ ಪ್ರಾಸ್ತಾವಿಕ ಮಾತುಗಳ ಮೂಲಕ ಸ್ವಾಗತಿಸಿದರು. ಕಾರ್ಯದರ್ಶಿ ರವಿ ಕಲಾ ವಂದಿಸಿದರು. ಉಪಾಧ್ಯಕ್ಷೆ ಉಮಾಶ್ರೀಕಾಂತ್‌ ನಿರೂಪಿಸಿದರು.

Advertisement

ಗೌರವಕ್ಕೆ ಪಾತ್ರ
ಪ್ರತಿಭೆ, ಕಲೆ, ಕ್ರೀಡೆ, ಸಾಹಿತ್ಯ, ಸಾಹಸ ಪ್ರವೃತ್ತಿಯಂತಹ ಸಾಧನೆಯಲ್ಲಿ ತೊಡಗಿ ವಿಶ್ವದ ಗೌರವಕ್ಕೆ ಪಾತ್ರಳಾಗಿದ್ದಾಳೆ. ತನ್ನ ಉತ್ತಮ ಗುಣ, ನಡತೆಗಳಿಂದ ಸರ್ವಸಂಪನ್ನಳೆನಿಸಿ ಪೂಜನೀಯಳ ಆಗಿದ್ದಾಳೆ. ಆದರೆ ಇಂದು ಸ್ತ್ರೀ ತನ್ನ ಮೇಲಾಗುತ್ತಿರುವ ಅನ್ಯಾಯ, ಅನಾಚಾರ, ಅತ್ಯಾಚಾರ ತಡೆಯುವಲ್ಲಿ ವಿಫಲಳಾಗುತ್ತಿದ್ದಾಳೆ. ಪ್ರೀತಿ, ಸ್ನೇಹ, ಆತ್ಮವಿಶ್ವಾಸದ ಬದುಕು ಈಗೀಗ ದುಸ್ತರವಾಗುತ್ತಿದೆ. ಕಾನೂನು ಸ್ತ್ರೀಯರ ಪರವಾಗಿದ್ದರೂ ತನಗಿರುವ ಮಿತಿಗಳಿಂದ ಹೊರಬರಲಾರದೆ ಮನದೊಳಗೆ ಕುಗ್ಗುತ್ತಿದ್ದಾಳೆ.
– ಶಹನಾಝ್ಎಂ. ಸಾಹಿತಿ

Advertisement

Udayavani is now on Telegram. Click here to join our channel and stay updated with the latest news.

Next