Advertisement

Mangaluru; ಸಮಾಜದಲ್ಲಿ ಅಸಮಾನತೆ, ಅತೃಪ್ತಿ ಹೆಚ್ಚುತ್ತಿದೆ

12:39 AM Sep 02, 2023 | Team Udayavani |

ಮಂಗಳೂರು: ಸಮಾಜದಲ್ಲಿ ಅಸಮಾನತೆ ಹೆಚ್ಚುತ್ತಿದ್ದು, ಅಸಂತೋಷ, ಅತೃಪ್ತಿ, ನೆಮ್ಮದಿ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ನಾವು ಜ್ವಾಲಾಮುಖಿಯಲ್ಲಿ ಕುಳಿತಿ ರುವಂತೆ ಭಾಸವಾಗುತ್ತಿದ್ದು, ಸಮು ದಾಯಗಳ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಯ್ಲಿ ಹೇಳಿದರು.

Advertisement

ಮಂಗಳೂರು ವಿ.ವಿ., ವಿಶ್ವ ವಿದ್ಯಾನಿಲಯ ಕಾಲೇಜು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ, ಕಜೆಮಾರು ಕೆದಂಬಾಡಿ ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ನಗರದಲ್ಲಿ ಶುಕ್ರವಾರ ಆಯೋಜಿಸಲಾದ ವಿಚಾರ ಸಂಕಿರಣ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಅಸಮಾನತೆ ಹೆಚ್ಚುತ್ತಿದೆ. ಇದಕ್ಕಾಗಿ ಮಹಾತ್ಮ ಗಾಂಧೀಜಿಯ ವಿಚಾರ ಹಾಗೂ ಕಮ್ಯುನಿಸ್ಟ್‌ ನಾಯಕ ದಿವಂಗತ ಕೃಷ್ಣ ಶೆಟ್ಟಿಯವರ ಆದರ್ಶಗಳನ್ನು ನೆರಳಾಗಿಸಿಕೊಂಡು ಹೋರಾಟ ನಡೆಸಬೇಕಾಗಿದೆ. ಕೃಷ್ಣ ಶೆಟ್ಟಿ ಅವರ ಬದುಕು, ತತ್ವಗಳು ನನ್ನ ಜೀವನದಲ್ಲಿ ಪ್ರಭಾವ ಬೀರಿವೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಿಪಿಎಂ ಪಾಲಿಟ್‌ ಬ್ಯೂರೋ ಸದಸ್ಯ, ಕೇರಳದ ಮಾಜಿ ಸಚಿವ ಎಂ.ಎ. ಬೇಬಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಉದಾತ್ತ ಆಲೋಚನೆಗಳನ್ನು ಜನರ ಮಧ್ಯೆ ಕೊಂಡೊಯ್ಯುವ ಕಾರ್ಯ ನಡೆಯಬೇಕಿದೆ ಎಂದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ| ವೂಡೇ ಪಿ. ಕೃಷ್ಣ ಮಾತನಾಡಿ, ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯ ಹೋರಾಟಕ್ಕೆ ಸೀಮಿತವಾದ ನಾಯಕರಲ್ಲ. ಗಾಂಧೀಜಿಯವರ ಸಾಧನೆ, ತತ್ವ ಹಲವು ಕ್ಷೇತ್ರಗಳಲ್ಲಿದೆ. ಅವರು ದೇಶದ ಒಂದು ಧೀಶಕ್ತಿ. ಗಾಂಧಿ ಪ್ರಶ್ನಾತೀತರಲ್ಲ. ಆದರೆ ಅವರನ್ನು ಅರಿಯದೆ, ಓದದೆ ಟೀಕಿಸುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ಒದಗಿಸುವಲ್ಲಿ ಪಾತ್ರ ವಹಿಸಿ, ಪ್ರಪಂಚವಿಂದು ಗೌರವಿಸುವ ಗಾಂಧಿಯನ್ನು ನಾವು ಅಧ್ಯಯನ ಮಾಡಬೇಕಾಗಿದೆ ಎಂದು ತಿಳಿಸಿದರು.

Advertisement

ಕಾರ್ಯಕ್ರಮದಲ್ಲಿ “ಸಮಾನತೆಗಾಗಿ ಸಂಘರ್ಷ’ (ಹೋರಾಟದಲ್ಲೇ ಕೃಷ್ಣ ಶೆಟ್ಟಿ ಬದುಕು) ಕೃತಿಯನ್ನು ಲೈಲಾ ಕರುಣಾಕರನ್‌(ಸಂಸತ್‌ ಮಾಜಿ ಸದಸ್ಯ ಪಿ. ಕರುಣಾಕರನ್‌ ಅವರ ಪತ್ನಿ) ಹಾಗೂ ಕೆ. ಪ್ರಮೋದ್‌ ಕುಮಾರ್‌ ರೈ ಅವರ ಸರಕಾರಿ ಸೇವೆಯಿಂದ ಹೊಲದೆಡೆಗಿನ ನಡೆ ಎಂಬ “ಮಣ್ಣಿಗೆ ಮರಳುವ ಮುನ್ನ’ ಕೃತಿಯನ್ನು ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ವಿ. ಬಾಲಸುಬ್ರಹ್ಮಣ್ಯನ್‌ ಬಿಡುಗಡೆಗೊಳಿಸಿದರು.

ಸಂಸತ್ತಿನ ಮಾಜಿ ಸದಸ್ಯ ಪಿ. ಕರುಣಾಕರನ್‌, ನಿವೃತ್ತ ಸೆಂಟ್ರಲ್‌ ಆಡಳಿತ ಟ್ರಿಬ್ಯೂನಲ್‌ ಸದಸ್ಯ ಸುಧೀರ್‌ ಕುಮಾರ್‌ ಉಪಸ್ಥಿತರಿದ್ದರು. ಮಂಗಳೂರು ವಿ.ವಿ. ಉಪ ಕುಲಪತಿ ಪ್ರೊ| ಜಯರಾಜ್‌ ಅಮೀನ್‌ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭ “ಸರ್ವ ಸಮಾನತೆ- ಗಾಂಧೀಜಿ ವಿಚಾರಧಾರೆಯ ಪ್ರಸ್ತುತತೆ ಮತ್ತು ನಾಗರಿಕ ಸೇವೆಯಲ್ಲಿ ಸ್ವತ್ಛತೆ ಮತ್ತು ಪ್ರಾಮಾಣಿಕತೆ’ ಎಂಬ ವಿಷಯಗಳ ಕುರಿತು ವಿಚಾರ ಸಂಕಿರಣ ನಡೆಯಿತು.

ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನದ ಪ್ರಮುಖರಾದ ಪ್ರಮೋದ್‌ ರೈ ಸ್ವಾಗತಿಸಿದರು. ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ| ಅನಸೂಯ ರೈ ವಂದಿಸಿದರು. ಮಂಗಳೂರು ವಿವಿ ಕಾಲೇಜಿನ ಯುವ ರೆಡ್‌ಕ್ರಾಸ್‌ ಅಧಿಕಾರಿ ಡಾ| ಭಾರತಿ ಪಿಲಾರ್‌, ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿ ಡಾ| ನಾಗರತ್ನ ಕೆ.ಎ. ಕಾರ್ಯಕ್ರಮ ನಿರೂಪಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next