Advertisement

Union Budget 2024: ಕೇಂದ್ರ ಬಜೆಟ್‌ ನಲ್ಲಿ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ…

03:57 PM Jul 23, 2024 | Team Udayavani |

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ ಮಂಡಿಸಿದ್ದ 2024-2025ನೇ ಸಾಲಿನ ಬಜೆಟ್‌ ನಲ್ಲಿ ಹಳದಿ ಲೋಹ ಚಿನ್ನದ ಮೇಲಿನ ಆಮದು ಸುಂಕವನ್ನು ಶೇ.15ರಿಂದ ಶೇ.6ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಇದು ಚಿನ್ನ ಖರೀದಿಸುವವರಿಗೆ ಸಂತಸದ ಸುದ್ದಿಯಾಗಿದೆ.

Advertisement

ಕೇಂದ್ರ ಸರ್ಕಾರ ಆಮದು ಬೆಳ್ಳಿ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದೆ. ಅಮೂಲ್ಯ ಲೋಹಗಳಾದ ಆಮದು ಚಿನ್ನದ ಮೇಲಿನ ಸುಂಕವನ್ನು ಶೇ.15ರಿಂದ ಶೇ.6ಕ್ಕೆ ಇಳಿಕೆ ಮಾಡಿದ್ದು, ಆಮದು ಬೆಳ್ಳಿಯ ಸುಂಕವನ್ನು ಶೇ.14.35ರಿಂದ ಶೇ.5.35ಕ್ಕೆ ಇಳಿಕೆ ಮಾಡಲಾಗಿದೆ.

ಚಿನ್ನ, ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಿದ್ದರಿಂದ ದೇಶೀಯವಾಗಿ ಚಿನ್ನದ ಬೇಡಿಕೆ ಹೆಚ್ಚಳವಾಗಲಿದ್ದು, ಚಿನ್ನ ಕಳ್ಳಸಾಗಣೆ ತಡೆಯಲು ನೆರವಾಗಲಿದೆ ಎಂದು ಇಂಡಸ್ಟ್ರಿ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಜಾಗತಿಕ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು, ಭಾರತದಲ್ಲೂ ಚಿನ್ನದ ಬೆಲೆ ಭಾರೀ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಆಮದು ಚಿನ್ನದ ಮೇಲಿನ ಸುಂಕವನ್ನು ಕಡಿತಗೊಳಿಸಿರುವುದಾಗಿ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

Advertisement

ಅಲ್ಲದೇ ಲಿಥಿಯಂ ಸೇರಿದಂತೆ 25 ಅಪಾಯಕಾರಿ ಖನಿಜಗಳ ಮೇಲಿನ ಆಮದು ಸುಂಕಕ್ಕೆ ವಿನಾಯ್ತಿ ನೀಡುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಈ ಮೂಲಕ ಭಾರತದ ಲಿಥಿಯಂ ಸರಬರಾಜಿನ ಹಾದಿ ಸುಗಮವಾಗಬೇಕಾಗಿದೆ. ಲಿಥಿಯಂ ರಾ ಮೆಟಿರಿಯಲ್‌ ಅನ್ನು ಎಲೆಕ್ಟ್ರಿಕ್‌ ವಾಹನಗಳ ಬ್ಯಾಟರಿಗಳಿಗೆ ಬಳಸಲಾಗುತ್ತದೆ.

ಇದನ್ನೂ ಓದಿ:Belagavi: ಹಲವು ವರ್ಷಗಳಿಂದ ಇತ್ಯರ್ಥವಾಗದ ಜಮೀನು ವಿವಾದ ಸಹೋದರರ ಸಾವಿನಲ್ಲಿ ಅಂತ್ಯ

Advertisement

Udayavani is now on Telegram. Click here to join our channel and stay updated with the latest news.

Next