ನವದೆಹಲಿ: ಪೆಟ್ರೋಲ್, ಡೀಸೆಲ್ ಹಾಗೂ ಎಲ್ ಪಿಜಿ ಬೆಲೆ ಏರಿಕೆ ವಿರೋಧಿಸಿ ತೃಣಮೂಲ ಕಾಂಗ್ರೆಸ್ ಸಂಸದರು ಸೋಮವಾರ(ಜುಲೈ 19) ಸಂಸತ್ತಿಗೆ ಸೈಕಲ್ ನಲ್ಲಿ ಆಗಮಿಸುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅವರೇ ನಾನಲ್ಲ ಅಂದ ಮೇಲೆ, ಅದರಲ್ಲಿರುವುದು ನಳಿನ್ ಧ್ವನಿಯೇ ಅಲ್ಲ : ರಘುಪತಿ ಭಟ್
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 101.84 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 89.87 ರೂಪಾಯಿ. ವಾಣಿಜ್ಯ ನಗರಿ ಮುಂಬಯಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 107.83 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 97.45 ರೂಪಾಯಿ. ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 102.08 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 93.02 ರೂಪಾಯಿಗೆ ಏರಿಕೆಯಾಗಿದೆ.
ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್, ಬಹುಜನ್ ಸಮಾಜ ಪಕ್ಷ ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿರುವುದಾಗಿ ವರದಿ ತಿಳಿಸಿದೆ. ಸಂಸತ್ ಮುಂಗಾರು ಅಧಿವೇಶನದಲ್ಲಿ ಡೀಸೆಲ್, ಪೆಟ್ರೋಲ್ ಹಾಗೂ ಎಲ್ ಪಿಜಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಮಾತನಾಡುವ ನಿಟ್ಟಿನಲ್ಲಿ ಉಭಯ ಸದನಗಳಲ್ಲಿಯೂ ಟಿಎಂಸಿ ನೋಟಿಸ್ ನೀಡಿರುವುದಾಗಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಸೋಮವಾರ ಮುಂಗಾರು ಅಧಿವೇಶನದ ಕಲಾಪ ಆರಂಭವಾದ ಬೆನ್ನಲ್ಲೇ ವಿಪಕ್ಷಗಳು ತೀವ್ರ ಕೋಲಾಹಲ ನಡೆಸಿದ ಪರಿಣಾಮ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2ಗಂಟೆವರೆಗೆ ಮುಂದೂಡಲಾಗಿತ್ತು.