Advertisement

ಯಾರದ್ದು ನಿಜವಾದ ಶಿವಸೇನಾ…ಸುಪ್ರೀಂನಿಂದ ಠಾಕ್ರೆ ಬಣಕ್ಕೆ ತಾತ್ಕಾಲಿಕ ರಿಲೀಫ್

12:23 PM Aug 04, 2022 | Team Udayavani |

ನವದೆಹಲಿ: ನಿಜವಾದ ಶಿವಸೇನಾ ಪಕ್ಷ ಯಾರದ್ದು ಎಂಬ ಶಿಂಧೆ ಮತ್ತು ಠಾಕ್ರೆ ಬಣದ ಕಾನೂನು ಸಮರದಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ.

Advertisement

ಇದನ್ನೂ ಓದಿ:ಕುಣಿಗಲ್: ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕ; ಮರವೇರಿ ಪ್ರಾಣ ರಕ್ಷಣೆ

“ತಮ್ಮದೇ ನಿಜವಾದ ಶಿವಸೇನಾ ಎಂದು ಮಾನ್ಯತೆ ನೀಡಬೇಕೆಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯ ಮನವಿಯ ಕುರಿತಂತೆ ಕೇಂದ್ರ ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬಾರದು  ಎಂದು ಸುಪ್ರೀಂಕೋರ್ಟ್ ಗುರುವಾರ (ಆಗಸ್ಟ್ 04) ತಿಳಿಸಿದೆ.

ಈ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದ್ದು, ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ಸಾಧ್ಯತೆ ಇರುವುದಾಗಿ ವರದಿ ವಿವರಿಸಿದೆ.

ಉದ್ಧವ್ ಠಾಕ್ರೆ ವಿರುದ್ಧ ಏಕನಾಥ ಶಿಂಧೆ ಬಂಡಾಯವೆದ್ದು ಭಾರತೀಯ ಜನತಾ ಪಕ್ಷದ ಜತೆ ಕೈಜೋಡಿಸಿದ್ದರು. 40ಕ್ಕೂ ಅಧಿಕ ಶಾಸಕರೊಂದಿಗೆ ಬಂಡಾಯ ಸಾರಿದ್ದ ಶಿಂಧೆ ಬಿಜೆಪಿ ಬೆಂಬಲದೊಂದಿಗೆ ಮುಖ್ಯಮಂತ್ರಿ ಹುದ್ದೆಗೆ ಏರಿದ್ದರು. ಇದೀಗ ತಮ್ಮದೇ ನಿಜವಾದ ಶಿವಸೇನಾ ವಾದಿಸಿದ್ದು, ಇದರ ವಿರುದ್ಧ ಉದ್ಧವ್ ಠಾಕ್ರೆ ಬಣ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next