Advertisement
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಆರ್. ಪ್ರಸನ್ನ ಕುಮಾರ್, ನರೇಗಾ ಯೋಜನೆ ಅಡಿ ಜಾಬ್ ಕಾರ್ಡ್ ಹೊಂದಿರುವ ಎಲ್ಲರಿಗೂ ಉದ್ಯೋಗ ನೀಡಲಾಗುತ್ತಿಲ್ಲ. ಜಾಬ್ ಕಾರ್ಡ್ ಹೊಂದಿರುವ ಗ್ರಾಪಂ ಸದಸ್ಯರಿಗೂ ಶಿವಮೊಗ್ಗದಲ್ಲಿ ಉದ್ಯೋಗ ನೀಡುವುದನ್ನು ಸರ್ಕಾರ ನಿಲ್ಲಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಈ ವರ್ಷ 8.5 ಕೋಟಿ ಮಾನವ ದಿನಗಳ ಸೃಜನೆಯ ಗುರಿ ಇದೆ. ಇದಕ್ಕಾಗಿ 3,739 ಕೋಟಿ ರೂ. ಅನುದಾನಕ್ಕೆ ಕೇಂದ್ರದ ಅನುಮೋದನೆ ದೊರಕಿದೆ. ಆದರೆ, ಕೇಂದ್ರದಿಂದ ಹಣ ಪಾವತಿ ಆಗುತ್ತಿಲ್ಲ. ಇದರಿಂದ ರಾಜ್ಯಕ್ಕೆ ಹಿನ್ನಡೆಯಾಗುತ್ತಿದೆ’ ಎಂದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಪಕ್ಷದ ಸದಸ್ಯರು, “ನಿಮ್ಮ ಎಲ್ಲ ತಪ್ಪುಗಳಿಗೂ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದೀರಿ. ಸರ್ಕಾರಕ್ಕೆ ಮನವರಿಕೆ ಮಾಡುವಲ್ಲಿ ಎಡವಿದ್ದೀರಿ’ ಎಂದರು.
Advertisement
ನರೇಗಾಕ್ಕೆ ಅಸಮರ್ಪಕ ಅನುದಾನ; ಪ್ರಗತಿಗೆ ಹಿನ್ನಡೆ
01:31 AM Feb 13, 2019 | |
Advertisement
Udayavani is now on Telegram. Click here to join our channel and stay updated with the latest news.