Advertisement
ಕಳೆದ ವರ್ಷ ಅಜೆಕಾರು ಮಿಯಾರು ಸಂಪರ್ಕಿಸುವ ರಸ್ತೆ ವಿಸ್ತರಣೆಗೊಳಿಸಿ ಮರು ಡಾಮರುಗೊಳಿಸಲಾಗಿತ್ತು. ಆದರೆ ಮುದೆಲ್ಕಡಿ ಬಳಿಯ ಅಪಾಯಕಾರಿ ತಿರುವಿನಲ್ಲಿ ರಸ್ತೆಗೆ ಹೊಂದಿಕೊಂಡಂತೆ ಚರಂಡಿ ನಿರ್ಮಾಣ ಮಾಡಿರುವುದರಿಂದ ವಾಹನ ಸವಾರರಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ.
ಈಗಾಗಲೇ ರಸ್ತೆಯ ಅಂಚು ಕುಸಿದಿದ್ದು ಇನ್ನಷ್ಟು ಅಪಾಯಕಾರಿಯಾಗಿ ಪರಿಣಮಿಸುವ ಮೊದಲು ಸೂಕ್ತ ವ್ಯವಸ್ಥೆಯಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.