Advertisement

ಕಡಲೆಕಾಯಿ ಪರಿಷೆಗೆ ಇಂದು ಚಾಲನೆ

12:51 PM Nov 13, 2017 | |

ಬೆಂಗಳೂರು: ಗ್ರಾಮೀಣ ಸೊಗಡಿನ ಬೆಂಗಳೂರು ಪಾರಂಪರಿಕ ಕಡಲೆಕಾಯಿ ಪರಿಷೆಗೆ ನ.13ರಂದು ಚಾಲನೆ ದೊರೆಯಲಿದೆ. ಬಸನಗುಡಿಯ ಬ್ಯೂಗಲ್‌ರಾಕ್‌ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ್‌ ಕುಮಾರ್‌, ಮೇಯರ್‌ ಆರ್‌.ಸಂಪತ್‌ರಾಜ್‌, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಪಾಲ್ಗೊಳ್ಳಲಿದ್ದಾರೆ.

Advertisement

ಶಾಸಕ ರವಿಸುಬ್ರಮಣ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಆರ್‌.ವಿ.ದೇವರಾಜ್‌, ಬಿಜೆಪಿ ಹಿರಿಯ ಮುಖಂಡ ರಾಮಚಂದ್ರಗೌಡ, ರೈತ ನಾಯಕ ಪುಟ್ಟಣ್ಣ, ಉಪಮೇಯರ್‌ ಪದ್ಮಾವತಿ ನರಸಿಂಹಮೂರ್ತಿ, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ಎರಡು ದಿನಗಳಕಾಲ ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆ ನಡೆಯಲಿದ್ದು, ಪ್ರತಿ ದಿನ ಸಂಜೆ ವಿವಿಧ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕೊನೆಯ ದಿನ ಸಿರಿಕಲಾ ಮೇಳ ತಂಡದಿಂದ ಯಕ್ಷಗಾನ ಪ್ರದರ್ಶನವಿರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next