Advertisement

ಎಸ್ ಡಿಪಿಐ ಸಮಾವೇಶದ ವೇಳೆ ಪೊಲೀಸರಿಗೆ ಅವಾಚ್ಯ ನಿಂದನೆ : ಪ್ರಕರಣ ದಾಖಲು

01:34 PM May 29, 2022 | Team Udayavani |

ಮಂಗಳೂರು : ಮೇ 27 ರಂದು ನಡೆದ ಎಸ್ ಡಿಪಿಐ ಸಮಾವೇಶದ ವೇಳೆ ನಗರದ ಕೊಡೆಕ್ಕಲ್ ಚೆಕ್ ಪೊಸ್ಟ್ ಬಳಿ ಪೊಲೀಸ್ ಸಿಬ್ಬಂದಿಗಳಿಗೆ ನಿಂದಿಸಿ , ವಾಹನ ಹತ್ತಿಸಲು ಯತ್ನಿಸಿದ ಕುರಿತು ಅಪರಿಚಿತ ಆರೋಪಿಗಳ ಕುರಿತು ಕಂಕನಾಡಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಚಂದ್ರಶೇಖರ.ಬಿ  ಅವರು ದೂರು ಸಲ್ಲಿಸಿದ್ದಾರೆ. ಕೆಟಿಎಂ ಬೈಕ್ ಸವಾರರಿಬ್ಬರು, ಸ್ಕೂಟರ್ ಸವಾರರಿಬ್ಬರು, ಕಾರು ಚಾಲಕ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ನಿಂದನೆ ಮಾಡಿದವರ ಕೈಯಲ್ಲಿ ಎಸ್ ಡಿಪಿಐ ಪಕ್ಷದ ಧ್ವಜವಿತ್ತು.ಈ ಕೃತ್ಯದ ವಿಡಿಯೋ ವೈರಲ್ ಆಗಿದೆ.

ಕಣ್ಣೂರು ಗ್ರಾಮದ ಡಾ.ಶ್ಯಾಮ್  ಪ್ರಸಾದ್ ಶೆಟ್ಟಿ ಮೈದಾನದಲ್ಲಿ ಎಸ್ ಡಿಪಿಐ ಪಕ್ಷ ಆಯೋಜಿಸಿದ್ದ ಜನಾಧಿಕಾರ ಕಾರ್ಯಕ್ರಮದ ವೇಳೆ ಬಂದೋಬಸ್ತ್ ನಲ್ಲಿದ್ದ ಸಿಬ್ಬಂದಿಗಳಿಗೆ ಪಡೀಲ್ ಕಡೆಯಿಂದ ಬಂದ ವಾಹನ ಸವಾರರು ಬ್ಯಾರಿ ಭಾಷೆಯಲ್ಲಿ ವಾಚ್ಯವಾಗಿ ನಿಂದಿಸುತ್ತಾ ಅತೀ ವೇಗವಾಗಿ ವಾಹನಗಳನ್ನು ಚಲಾಯಿಸಿಕೊಂಡು ಹಿಡಿದ್ದು ಮಾತ್ರವಲ್ಲದೆ, ಕರ್ತವ್ಯದಲ್ಲಿದ್ದ ಪಿಸಿ ಸಂಗನ ಗೌಡ ರವರ ಮೈಮೇಲೆ ಹಾಯಿಸಲು ಮುಂದಾಗಿದ್ದಾರೆ. ಆ ವೇಳೆ ಪಕ್ಕಕ್ಕೆ ಹಾರಿ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ.

ಪೊಲೀಸ್ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅಡೆ, ನಿಂದಿಸಿ ಕರ್ತವ್ಯದಲ್ಲಿರುವ ಪೋಲಿಸರ ಮಾನಸಿಕ ಸ್ಥೈರ್ಯ ಹಾಳು ಮಾಡಿರುವ ಕುರಿತು  ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next