Advertisement

Molahalli Society: ಇಂದು ಸಹಕಾರ ಸಾನಿಧ್ಯ ನೂತನ ಕಟ್ಟಡ ಉದ್ಘಾಟನ ಸಮಾರಂಭ

09:08 AM Jun 08, 2024 | Team Udayavani |

ತೆಕ್ಕಟ್ಟೆ : ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಬಿದ್ಕಲ್‌ಕಟ್ಟೆ ಪ್ರಧಾನ ಕಚೇರಿ ಸಹಕಾರ ಸಾನಿಧ್ಯ ನೂತನ ಕಟ್ಟಡದ ಉದ್ಘಾಟನ ಸಮಾರಂಭವು ಜೂ. 8ರ ಶನಿವಾರ ಬೆಳಗ್ಗೆ 10.35ಕ್ಕೆ ಜರಗಲಿದೆ.

Advertisement

ಮಂಗಳೂರಿನ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದು, ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಗೋದಾಮು ಉದ್ಘಾಟಿಸಲಿದ್ದಾರೆ.

ಮಾಜಿ ಸಚಿವ‌ ಕೆ. ಜಯಪ್ರಕಾಶ್‌ ಹೆಗ್ಡೆ ಅವರು ಮೊಳಹಳ್ಳಿ ಶಿವರಾವ್‌ ಸಭಾಭವನ ಹಾಗೂ ನವೀಕೃತ ಶಿವರಾವ್‌ ಪ್ರತಿಮೆಯನ್ನು ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅನಾವರಣಗೊಳಿಸಲಿದ್ದಾರೆ. ಸಂಘದ ಅಧ್ಯಕ್ಷ ಎಂ. ಮಹೇಶ್‌ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next