Advertisement

ಮೂಳೂರು : ಅಲ್ –ಇಹ್ಸಾನ್ ಮಹಿಳಾ ಕಾಲೇಜು ಕಟ್ಟಡ ಉದ್ಘಾಟನೆ

05:27 PM Jun 26, 2022 | Team Udayavani |

ಕಾಪು: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಅಧೀನದಲ್ಲಿರುವ ಮೂಳೂರು ಅಲ್ – ಇಹ್ಸಾನ್ ಮಹಿಳಾ ಕಾಲೇಜು ಕಟ್ಟಡವನ್ನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು.

Advertisement

ಈ ಸಂದರ್ಭ ಮಾತನಾಡಿದ ಅವರು, ಸಮಾಜದಲ್ಲಿರುವ ಕಡು ಬಡವರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂಬ ಚಿಂತನೆಯೊಂದಿಗೆ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮಹತ್ವದ ಭೂಮಿಕೆಯನ್ನು ನಿಭಾಯಿಸುತ್ತಿದೆ. ಸುನ್ನಿ ಸೆಂಟರ್ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸರಕಾರದ ಎಲ್ಲಾ ಅನುದಾನಗಳನ್ನು ದೊರಕಿಸಿಕೊಡಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮತ್ತು ಅಲ್ ಇಹ್ಸಾನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಹು ಅಸ್ಸಯ್ಯಿದ್ ಕೆ. ಎಸ್. ಆಟಕೋಯ ತಂಙಳ್ ಕುಂಬೋಳ್ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಯು. ಟಿ. ಖಾದರ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಮೊಯ್ದಿನ್ ಬಾವ, ರಾಜ್ಯ ವಕ್ಪ್ ಬೋರ್ಡ್ ಅಧ್ಯಕ್ಷ ಶಾಫಿ ಸ ಅದಿ ಮೊದಲಾದವರು ಉಪಸ್ಥಿತರಿದ್ದರು.

ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಯು. ಟಿ. ಖಾದರ್ ಮಾತನಾಡಿ, ದೇಶವು ಬಲಿಷ್ಠವಾಗಬೇಕಾದರೆ ಶಿಕ್ಷಣದ ಅಗತ್ಯತೆ ಇದೆ. ಉತ್ತಮ ಜನಾಂಗವನ್ನು ನಿರ್ಮಾಣ ಮಾಡಬೇಕು. ಪ್ರತಿಯೊಬ್ಬರಿಗೂ ಶಿಕ್ಷಣ ಸಿಗುವಂತಾಗಬೇಕು. ಯಾರೆಲ್ಲಾ ಶಿಕ್ಷಣಕ್ಕೆ ಒತ್ತು ನೀಡಿ ಶಿಕ್ಷಣಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆಯೋ ಅವರೇ ನಿಜವಾದ ದೇಶ ಪ್ರೇಮಿಗಳಾಗಿರುತ್ತಾರೆ ಎಂದರು.

Advertisement

ರಾಜ್ಯ ವಕ್ಪ್ ಬೋರ್ಡ್ ಅಧ್ಯಕ್ಷ ಶಾಫಿ ಸ ಅದಿ ಮಾತನಾಡಿ, ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಸ್ಥಾಪನೆಗೆ ತೀರ್ಮಾನಿಸಲಾಗಿದ್ದು ಇದಕ್ಕಾಗಿ 25 ಕೋಟಿ ಅನುದಾನ ಮೀಸಲಿಡಲಾಗಿದೆ. ಮಂಗಳೂರು, ಹೈದರಬಾದ್-ಕರ್ನಾಟಕ ಹಾಗೂ ಮುಂಬೈ- ಕರ್ನಾಟಕದಲ್ಲೂ ಮಹಿಳಾ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಲಾಗುವುದು ಎಂದರು.

ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಮನುಷ್ಯನ ಜೀವನದಲ್ಲಿ ಕದಿಯಲಾಗದ ಸಂಪತ್ತು ಎಂದರೆ ಅದು ಶಿಕ್ಷಣ ಮಾತ್ರ. ಶಿಕ್ಷಣಕ್ಕೆ ಯಾವುದೇ ಜಾತಿ, ಮತ, ಧರ್ಮಗಳ ಭೇದವಿಲ್ಲ. ಬದುಕನ್ನು ಕಟ್ಟಿಕೊಳ್ಳಲು ಶಿಕ್ಷಣ ಅತ್ಯಗತ್ಯವಾಗಿದ್ದು, ಅದಕ್ಕಾಗಿ ಸುನ್ನಿ ಸೆಂಟರ್ ನಡೆಸುತ್ತಿರುವ ಸೇವೆ ಸ್ಮರಣೀಯವಾಗಿದೆ ಎಂದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಮೊಯ್ದಿನ್ ಬಾವ, ಅನಿವಾಸಿ ಭಾರತೀಯ ಉದ್ಯಮಿಗಳಾದ ಅಕ್ರಮ್ ಮುಹಮ್ಮದ್ ಶೇಖ್, ಅಬ್ದುಲ್ ರಝಾಕ್ ಯುಎಇ, ಅಬೂಸಾಲಿಹ್ ಯುಎಇ, ಉಡುಪಿ ಜಿಲ್ಲಾ ಗ್ರಾಮ ಪಂಚಾಯತ್ ಒಕ್ಕೂಟದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಕಾಪು, ಬೆಳಗಾವಿ ವಕ್ಪ್ ಸಲಹಾ ಮಂಡಳಿ ಅಧ್ಯಕ್ಷ ಮುಸ್ತಾಕ್ ಫಾರೂಕಿ, ಮುಹಮ್ಮದ್ ಇಜುಜಾದ್ದೀನ್, ಮೀಫ್ ಅಧ್ಯಕ್ಷ ಮೂಸಬ್ಬ, ಸಯ್ಯದ್ ತ್ವಾಹಾ ಬಾಫಕೀ ತಂಙಳ್ ಯುಎಇ, ಮುಕ್ತಾರ್ ತಂಙಳ್ ಕುಂಬೋಳ್, ಅಲ್ ಇಹ್ಸಾನ್ ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ. ಇ. ಮೂಳೂರು, ಅಲ್ ಇಹ್ಸಾನ್ ಸಂಸ್ಥೆಯ ಕಾರ್ಯಾಧ್ಯಕ್ಷ ಸಯ್ಯದ್ ಅಹಮದ್, ಕುತ್ಯಾರು ನವೀನ್ ಶೆಟ್ಟಿ, ಶರೀಫ್ ಹಾಜಿ, ಮೂಳೂರು ಜುಮಾ ಮಸೀದಿ ಅಧ್ಯಕ್ಷ ಮುರಾದ್ ಆಲಿ, ಸೆಂಟ್ರಲ್ ಕಮಿಟಿ ಕಾರ್ಯಾಧ್ಯಕ್ಷ ಸಯ್ಯದ್ ಮುಹಮ್ಮದ್ ಉಚ್ಚಿಲ, ಕ್ರೆಸೆಂಟ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಮುಖ್ಯಸ್ಥ ಶಂಶುದ್ದೀನ್, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಸಂಸ್ಥೆಯ ಉಪಾಧ್ಯಕ್ಷ ವಲವೂರು ಸಅದಿ, ಮುಹಮ್ಮದ್ ಆಲಿ ಕಾಪು, ಮಿಸ್ಬಾಹ್ ಮಹಿಳಾ ಕಾಲೇಜು ಅಧ್ಯಕ್ಷ ಮುಮ್ತಾಝ್ ಆಲಿ, ದ. ಕ. ವಕ್ಪ್ ಸಲಹಾ ಸಮಿತಿಯ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್, ಸ್ಥಳದಾನಿ ಮೊಹಿದಿನ್ ಹಾಜಿ ಮೂಳೂರು, ಅಬ್ದುಲ್ ರವೂಫ್, ಮುಹಮ್ಮದ್ ಆಲಿ ಕುಂಞಿ ತಂಞಳ್, ತ್ವಾಹಾ ಬಾಫಕಿ ತಂಙಳ್, ಸಂಯುಕ್ತ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ನೇಜಾರು, ಕಾಪು ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಭಿ ಅಹಮದ್ ಖಾಝಿ, ಅಲ್‌ಇಹ್ಸಾನ್ ಮಹಿಳಾ ಶರೀಅತ್ ಕಾಲೇಜಿನ ಪ್ರಾಂಶುಪಾಲರಾದ ಮುಹಮ್ಮದ್ ಅಲ್ ಕಾಸಿಮಿ ಅಳಕೆಮಜಲು, ಅಲ್‌ಇಹ್ಸಾನ್ ಹಾಫಿಝ್ ಕುರ್‌ಆನ್ ಪ್ರಾಂಶುಪಾಲ ಹಾಫಿಝ್ ಹಾರಿಸ್ ಸಅದಿ, ಅಲ್‌ಇಹ್ಸಾನ್ ಸಂಸ್ಥೆಯ ಪ್ರಾಂಶುಆಲ ಹಬೀಬ್ ರೆಹ್ಮಾನ್ ಉಪಸ್ಥಿತರಿದ್ದರು.

ಅಲ್‌ಇಹ್ಸಾನ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಶಾಕ್ ಬೊಳ್ಳಾಯಿ ಸ್ವಾಗತಿಸಿದರು. ಅಲ್‌ಇಹ್ಸಾನ್ ಸಂಸ್ಥೆಯ ಮ್ಯಾನೇಜರ್ ಮುಸ್ತಫಾ ಸಅದಿ ಪ್ರಸ್ತಾವನೆಗೈದರು. ವೈ.ಬಿ.ಸಿ. ಮೂಳೂರು ವಂದಿಸಿದರು. ರಕೀಬ್ ಕನ್ನಂಗಾರ್ ಮತ್ತು ಕಲಂದರ್ ಕಾರ್ಯಕ್ರಮ ನಿರೂಪಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next