Advertisement
6 ಕೋರ್ಟ್ಪುತ್ತೂರಿನಲ್ಲಿ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿವೆ. ಈಗ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ವಿಭಾಗ ಮಂಜೂರುಗೊಂಡಿದೆ.
ಮಿನಿ ವಿಧಾನ ಸೌಧದ ಬಳಿ ಇರುವ ಹಿಂದಿನ ಜೆಎಂಎಫ್‌ಸಿ ನ್ಯಾಯಾಲಯ ಮತ್ತು ಪ್ರಸ್ತುತ ಮಧ್ಯಸ್ಥಿಕಾ ಕೇಂದ್ರವಿರುವ ಕಟ್ಟಡದಲ್ಲಿ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಕಾರ್ಯ ಕಲಾಪಗಳನ್ನು ನಡೆಸಲಿದೆ. ಇಂದು ಉದ್ಘಾಟನೆ
ನೂತನ ನ್ಯಾಯಾಲಯ ವ್ಯವಸ್ಥೆಯ ಉದ್ಘಾಟನ ಕಾರ್ಯಕ್ರಮ ಮೇ 27ರಂದು ಪೂರ್ವಾಹ್ನ 10.30ಕ್ಕೆ ನಡೆಯಲಿದೆ. ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಉದ್ಘಾಟನೆ ನೆರವೇರಿಸಲಿದ್ದಾರೆ. ನೂತನ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಪ್ರಥಮ ನ್ಯಾಯಾಧೀಶರಾಗಿ ಕೋಲಾರದ ವೆಂಕಟೇಶ್ ನೇಮಕಗೊಂಡು ಕರ್ತವ್ಯ ನಿರ್ವಹಿಸಲಿದ್ದಾರೆ.
ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 2018 -19ರ ವಿಲೇವಾರಿಗೆ ಬಾಕಿ ಇರುವ ಸಿವಿಲ್ ಕೇಸುಗಳು ಮತ್ತು 2018ನೇ ಸಾಲಿನ ಸಿಸಿ ಪ್ರಕರಣಗಳ ವಿಚಾರಣೆ ನೂತನ ನ್ಯಾಯಾಲಯದಲ್ಲಿ ನಡೆಯಲಿದೆ.
Related Articles
ಪುತ್ತೂರಿಗೆ ಮಂಜೂರುಗೊಂಡಿರುವ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಉದ್ಘಾಟನ ಕಾರ್ಯಕ್ರಮ ನಡೆದು ನಿಯಮದಂತೆ 11 ಗಂಟೆಗೆ ನ್ಯಾಯಾಲಯದ ಕಾರ್ಯಕಲಾಪಗಳು ಆರಂಭಗೊಳ್ಳಲಿವೆ. 12 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.
ಭಾಸ್ಕರ ಕೋಡಿಂಬಾಳ, ನಿಕಟಪೂರ್ವ ಅಧ್ಯಕ್ಷರು, ಪುತ್ತೂರು ವಕೀಲರ ಸಂಘ
Advertisement