Advertisement
ಅವರು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಮಾರಂಭ ಹಾಗೂ ಅಂತರ್ ಕಾಲೇಜು ಪ್ರತಿಭಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್ ಅವರು ಮಾತನಾಡಿ, ವ್ಯಕ್ತಿ ಮುಖ್ಯವಲ್ಲ ಸಂಸ್ಥೆ ಮುಖ್ಯ, ಹಣ ಮುಖ್ಯವಲ್ಲ ಭಾವನೆ ಮುಖ್ಯ ಪ್ರತಿಯೊಬ್ಬರು ನಿಂತ ನೀರಾಬಾರದು ಸದಾ ಹರಿಯುವ ನೀರಾಗಬೇಕು. ರಾಘವೇಂದ್ರ ರಾಯರು ಜೀವನದಲ್ಲಿ ಬೆಳೆದ ರೀತಿ ಹಾಗೂ ನ್ಯೂನ್ಯತೆಗಳನ್ನು ಮೆಟ್ಟಿನಿಂತ ಅವರ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಒಂದು ಪಾಠವಾಗಿದೆ ಎಂದರು.
ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರದ ರೂಪಕಲಾ ಮೂರು ಮುತ್ತು ಕಲಾವಿದರಾದ ಸತೀಸ್ ಪೈ, ಅಶೋಕ್ ಶ್ಯಾನುಭಾಗ್, ಸಂತೋಷ್ ಪೈ ಅವರನ್ನು ಸಮ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಕಾರ್ತಿಕೇಯ ಮಧ್ಯಸ್ಥ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ಕುಮಾರ್ ಶೆಟ್ಟಿ ವರದಿ ವಾಚಿಸಿದರು. ನ್ಯಾಯವಾದಿ ರಾಘವೇಂದ್ರ ಚರಣ್ ನಾವಡ ಕಾರ್ಯಕ್ರಮ ನಿರ್ವಹಿಸಿದರು. ಅನಂತರ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಅಂತರ್ ಕಾಲೇಜು ಪ್ರತಿಭಾ ಸ್ಪರ್ಧೆ ನಡೆಯಿತು.