ದಾವಣಗೆರೆ: ಕೋವಿಡ್- 19 ಸೋಂಕಿತರಿಗೆ ತ್ವರಿತ, ಪರಿಣಾಮಕಾರಿ ಚಿಕಿತ್ಸೆ, ಮೇಲ್ವಿಚಾರಣೆ, ನಿಯಂತ್ರಣ ಹಾಗೂ ನಿರ್ವಹಣೆಗಾಗಿ ರಾಜ್ಯದಲ್ಲೇ ವ್ಯವಸ್ಥಿತ ಮತ್ತಮಾದರಿಯಾದ ಜಿಲ್ಲಾ ಕೋವಿಡ್ ಕಂಟ್ರೋಲ್ ರೂಂ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಕೋವಿಡ್-19 ಕಂಟ್ರೋಲ್ ರೂಂಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಹಿಂದೆ ಕೋವಿಡ್‌ಫಲಿತಾಂಶಗಳನ್ನು ದೇಶಾದ್ಯಂತ ಐಸಿಎಂಆರ್ ಪೋರ್ಟಲ್‌ನಲ್ಲಿ ಅಪ್ ಲೋಡ್ ಮಾಡಲಾಗುತ್ತಿತ್ತು. ಈಗ ಎಲ್ಲಾ ಆ್ಯಪ್ ಗಳನ್ನು ವಿಲೀನಗೊಳಿಸಿ ಒಂದು ಲೈನ್ ಲಿಸ್ಟ್ ಆ್ಯಪ್‌ಅಭಿವೃದ್ಧಿಪಡಿಸಲಾಗಿರುವುದನ್ನು ಕಂಟ್ರೋಲ್‌ರೂಂನಿಂದ ಕಾರ್ಯ ನಿರ್ವಹಿಸಲಾಗುವುದು. ನೇರವಾಗಿ ರಾಜ್ಯ ವಾರ್ ರೂಂಗೆ ಸಂಪರ್ಕ ಹೊಂದಿ ಕೆಲಸ ನಿರ್ವಹಿಸಲಿರುವ ಕಂಟ್ರೋಲ್ ರೂಂನಲ್ಲಿ 8 ವಿಭಾಗಗಳಿದ್ದು (ಬಕೆಟ್ಸ್) ಕೋವಿಡ್ ಸೋಂಕಿತರ ಮೇಲ್ವಿಚಾರಣೆ ಮತ್ತು ನಿರ್ವಹಣೆ ಸೇರಿದಂತೆ ತ್ವರಿತ ಮತ್ತು ಶೀಘ್ರ ಚಿಕಿತ್ಸೆಗೆ ಸ್ಪಂದಿಸಲಿವೆ ಎಂದು ತಿಳಿಸಿದರು.
ರಾಜ್ಯ ವಾರ್ ರೂಂ ವಿಂಗಡಿಸಿದ ಪ್ರಕರಣಗಳನ್ನುಜಿಲ್ಲಾ ಕಂಟ್ರೋಲ್ ರೂಂನಿಂದ ಪ್ರತಿದಿನವೀಕ್ಷಿಸಲಾಗುವುದು. ಜಿಲ್ಲೆಗೆ ಸಂಬಂಧಿ ಸಿದ ಪ್ರಕರಣಗಳಬಗ್ಗೆ ಹೆಚ್ಚಿನ ಮಾಹಿತಿ ಸಹ ಪಡೆಯಲಾಗುವುದು. ನಿಯೋಜಿತ ವೈದ್ಯರು ಮತ್ತು ಸಿಬ್ಬಂದಿ ಪ್ರತಿ ದಿನ ರೋಗಿಗಳಿಗೆ ಕರೆ ಮಾಡಿ ಲಕ್ಷಣಗಳು, ಇತರೆವಿವರಗಳ ಮಾಹಿತಿ ಪಡೆದು ಕಂಟ್ರೋಲ್ ರೂಂನಎಂಟು ವಿಭಾಗಗಳಲ್ಲಿ ಸಿಗುವ ಸೌಲಭ್ಯ ಮತ್ತು ರೋಗ ನಿಯಂತ್ರಣದ ಕುರಿತು ಮಾಹಿತಿ ನೀಡುವರು ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆ ಸೇವೆ, ಕೋವಿಡ್ ಕೇರ್ ಸೆಂಟರ್, ಹೋಂ ಐಸೋಲೇಷನ್, ಖಾಸಗಿ ಆಸ್ಪತ್ರೆ, ಸರ್ಕಾರಿ ಆಂಬುಲೆನ್ಸ್, ಖಾಸಗಿ ಆಸ್ಪತ್ರೆ, ಈಗಾಗಲೇ ಆಸ್ಪತ್ರೆಯಲ್ಲಿರುವವರು, ಅನ್‌ರೆಸ್ಪಾನ್ಸಿವ್,ಐಸಿಎಂಆರ್ ಲಿಸ್ಟ್ ಪಡೆಯುವ ಕೆಲಸದೊಂದಿಗೆ
ಸೆಂಟ್ರಲ್ ಹಾಸ್ಪಿಟಲ್ ಬೆಡ್ ಮ್ಯಾನೇಜ್‌ಮೆಂಟ್ ಸಿಸ್ಟಂ ವಿಭಾಗ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ಬೆಡ್ ಗಳ ಲಭ್ಯತೆ ಮಾಹಿತಿ ಪಡೆಯಬಹುದು. ಶಿಫ್ಟಿಂಗ್ ಟೀಂ ವಿಭಾಗದಿಂದ ತಾಲೂಕುಗಳಿಂದ ಜಿಲ್ಲೆಗೆ ಹೀಗೆ ಉನ್ನತ ಆಸ್ಪತ್ರೆ, ಇತರೆಡೆಗಳಿಗೆ ಶಿಫ್ಟ್ ಮಾಡಲು ಸಹಕರಿಸುವ ಕಾರ್ಯವನ್ನ ಕೋವಿಡ್ ರೂಂ ನಿರ್ವಹಣೆ ಮಾಡಲಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಿ.ಡಿ. ರಾಘವನ್ ಮಾತನಾಡಿ, ವಿಶೇಷ ಭೂಸ್ವಾಧಿನಾಕಾರಿ ರೇಷ್ಮಾ ಹಾನಗಲ್ ಜಿಲ್ಲಾ ಕೋವಿಡ್ ಕಂಟ್ರೋಲ್ ರೂಂ ನೋಡಲ್ ಅಧಿಕಾರಿಯಾಗಿ ಹಾಗೂ ಕೋವಿಡ್ ಕಂಟ್ರೋಲ್ ರೂಂ ಮೇಲ್ವಿಚಾರಣೆಗಾಗಿ ಡಾ| ಎಸ್. ರುದ್ರೇಶ್, ಡಾ| ಕೆ. ಹೇಮಂತ್‌ಕುಮಾರ್, ಡಾ| ಕೆ. ನೇತಾಜಿ ಹಾಗೂ ಕಂಟೋಲ್ ರೂಂ ನಿರ್ವಹಣೆಗೆ ಇತರೆ ತಾಂತ್ರಿಕ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಪದ್ಮಾ ಬಸವಂತಪ್ಪ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ನಾಗರಾಜ್, ಡಾ| ನಟರಾಜ್, ಡಾ| ಯತೀಶ್ ಇತರರು ಇದ್ದರು.