Advertisement

ಜಿಲ್ಲಾಸ್ಪತ್ರೆ ಎನ್‌ಎಂಆರ್‌ ಸ್ಕ್ಯಾನ್ ಕೇಂದ್ರ ಉದ್ಘಾಟನೆ

01:23 PM Dec 14, 2019 | Team Udayavani |

ಗದಗ: ಜಿಲ್ಲಾಸ್ಪತ್ರೆಯಲ್ಲಿ 6.70 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾದ ಎನ್‌ಎಂಆರ್‌ ಸ್ಕ್ಯಾನ್ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಶುಕ್ರವಾರ ಉದ್ಘಾಟಿಸಿದರು.

Advertisement

ಇದೇ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಅಗತ್ಯವಾದ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಉದ್ಘಾಟಿಸಿ, ರಾಜ್ಯದಲ್ಲಿ ಮೊಟ್ಟಮೊದಲಿಗೆ ಎನ್‌ಎಂಆರ್‌ ಸ್ಕ್ಯಾನ್ ಸೌಲಭ್ಯವನ್ನು ಗದುಗಿನಲ್ಲಿ ಉಚಿತವಾಗಿ ಒದಗಿಸಲಾಗುತ್ತಿದೆ ಎಂದು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ| ಪಿ.ಎಸ್‌. ಭೂಸರೆಡ್ಡಿ ಮಾಹಿತಿ ನೀಡಿದರು.

ಶಾಸಕ ಎಚ್‌.ಕೆ. ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಎಚ್‌. ಪಾಟೀಲ, ಶಾಸಕ ಕಳಕಪ್ಪ ಬಂಡಿ, ಜಿ.ಪಂ. ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚಾರ, ತಾ.ಪಂ. ಸದಸ್ಯೆ ಮುಮ್ತಾಜ್‌ ಬಿ.ನದಾಫ್‌, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಸಿಇಒ ಡಾ| ಆನಂದ್‌ ಕೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಶ್ರೀನಿವಾಸ ದೇಶಪಾಂಡೆ, ಜಿಲ್ಲಾಸ್ಪತ್ರೆ ಸರ್ಜನ್‌ ಡಾ| ಬಿ.ಸಿ. ಕರಿಗೌಡರ, ವೈದ್ಯಕೀಯ ಅಧಿಕ್ಷಕ ಡಾ| ಪಲ್ಲೇದ, ಜಿ.ಎಸ್‌., ಡಾ| ಬಿಜ್ಜಳ, ಮಹಿಳಾ ಮತ್ತು ಅಭಿವೃದ್ಧಿ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್‌. ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಜಿ.ವಿ. ಶಿರೋಳ ಹಾಗೂ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿ ಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next