ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ನವೀಕರಿಸಲಾಗಿರುವ ಸೆಂಟ್ರಲ್ ವಿಸ್ತಾ ಅವೆನ್ಯೂ(ಕರ್ತವ್ಯ ಪಥ) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉದ್ಘಾಟಿಸಲಿದ್ದಾರೆ.
101 ಎಕರೆ ಜಾಗದಲ್ಲಿ ಅಭಿವೃದ್ಧಿಪಡಿಸಲಾಗಿರುವ ಹುಲ್ಲುಹಾಸು, ಕೆಂಪು ಬಣ್ಣದ ಗ್ರಾನೈಟ್‌ನಿಂದ ಕೂಡಿರುವ 16.5ಕಿ.ಮೀ. ನಡಿಗೆ ಪಥ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪ್ರಧಾನಿ ಅವರು ಲೋಕಾರ್ಪಣೆ ಮಾಡಲಿದ್ದಾರೆ.
40 ಅಂಗಡಿಗಳಿಗೆ ಸ್ಥಳಾವಕಾಶ ಕಲ್ಪಿಸಿಕೊಡಲಿರುವ ವೆಂಡಿಂಗ್ ಜೋನ್ ಕೂಡ ಲೋಕಾರ್ಪಣೆಗೊಳ್ಳಲಿದೆ.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.
ಇದೇ ವೇಳೆ, ರಾಜಪಥ ಎಂಬ ಹೆಸರಿನ ಬದಲು “ಕರ್ತವ್ಯಪಥ’ ಎಂದು ಹೆಸರು ಇರಿಸುವ ಬಗ್ಗೆ ನವದೆಹಲಿ ಮಹಾನಗರ ಪಾಲಿಕೆ ನಿರ್ಣಯ ಕೈಗೊಂಡಿದೆ.