Advertisement

ರಾಜ್ಯದಲ್ಲೂ ಆತ್ಮನಿರ್ಭರ ಗೋ ಶಾಲೆ ಆರಂಭ: ಸಚಿವ ಪ್ರಭು ಚೌವ್ಹಾಣ್‌

12:26 AM Jun 28, 2022 | Team Udayavani |

ಚಿಕ್ಕಮಗಳೂರು: ಆತ್ಮ ನಿರ್ಭರ ಗೋಶಾಲೆ ನಿರ್ಮಾಣ ಮಾಡುವ ದೃಷ್ಟಿಯಿಂದ ಉತ್ತರ ಪ್ರದೇಶ ಹಾಗೂ ಗುಜರಾತ್‌ಗೆ ಭೇಟಿ ನೀಡಿ ಅಧ್ಯಯನ ಮಾಡಲಾಗಿದ್ದು, ಶೀಘ್ರವೇ ರಾಜ್ಯದಲ್ಲೂ ಆತ್ಮನಿರ್ಭರ ಗೋ ಶಾಲೆ ಆರಂಭವಾಗಲಿವೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್‌ ತಿಳಿಸಿದರು.

Advertisement

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಎಮ್ಮೆದೊಡ್ಡಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ರಾಜ್ಯದ ಪ್ರಥಮ ಸರಕಾರಿ ಗೋಶಾಲೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಜಿಲ್ಲೆಗಳಲ್ಲಿ ಗೋಮಾಳ ಆಯ್ಕೆ ಮಾಡಿಕೊಂಡು ಗೋಶಾಲೆ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಸರಕಾರ ಪಶು ಸಂಜೀವಿನಿ ಯೋಜನೆ ಜಾರಿಗೊಳಿಸಿದೆ.

ರಾಜ್ಯದ ಮೊದಲ ಗೋಶಾಲೆಯನ್ನು ಉದ್ಘಾಟಿಸಿದ್ದು ಸಂತೋಷ ವಾಗಿದೆ. ರೈತರಿಗೆ ಸರಕಾರ ದಿಂದ ಎಲ್ಲ ಸೌಲಭ್ಯಗಳನ್ನು ನೀಡಲಾಗುವುದು. ಚಿಕ್ಕಮಗಳೂರು ಜಿಲ್ಲೆಯ ಪಶುಪಾಲನೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿಯಿಂದ ಏಜೆನ್ಸಿಯವರು 10 ಸಾವಿರ ರೂ. ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಈ ಸಂಬಂಧ ತನಿಖೆ ನಡೆಸಲಾಗುವುದು ಎಂದು ಸಚಿವ ಪ್ರಭು ಚೌವ್ಹಾಣ್‌ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next