ಕಾಪು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ನ ಕಾಪು ಶಾಖೆಯ ಬ್ಯಾಂಕಿಂಗ್ ವಿಭಾಗ ಮತ್ತು ಮತ್ಸ್ಯ ಕ್ಯಾಂಟೀನ್‌ನ ಉದ್ಘಾಟನೆ ಡಿ. 30ರಂದು ಮಧ್ಯಾಹ್ನ 3 ಗಂಟೆಗೆ ಕಾಪು ತಾಲೂಕು ಕಚೇರಿ ಬಳಿಯ ಮತ್ಸ್ಯಸೌಧದಲ್ಲಿ ಜರಗಲಿದೆ ಎಂದು ಫೆಡರೇಶನ್ ಅಧ್ಯಕ್ಷರಾಗಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.
ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್ ಉದ್ಘಾಟಿಸಲಿದ್ದು, ಯಶ್‌ಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬ್ಯಾಂಕಿಂಗ್ ವಿಭಾಗವನ್ನು ಉದಾಟಿಸುವರು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಕಾಪು ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ, ಬೆಳಪು ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಕಟಪಾಡಿ ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷ ವಿಜಯ್ ಕುಮಾರ್, ಇನ್ನಂಜೆ ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷ ರಾಜೇಶ್ ರಾವ್, ಶಿರ್ವ ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಕುತ್ಯಾರು, ಪಡುಬಿದ್ರಿ ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಕಾಪು ಹಳೆ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈ, ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಪೊಲಿಪು ಮೊಗವೀರ ಮಹಾಸಭಾ ಅಧ್ಯಕ್ಷ ಶ್ರೀಧರ್ ಕಾಂಚನ್ ಉಪಸ್ಥಿತರಿರುವರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ಉಚ್ಚಿಲ ದಸರಾ ಸಂದರ್ಭದಲ್ಲಿ ನಡೆಸಿದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ಮತ್ತು ಕಿಸಾನ್ ಕಾರ್ಡ್‌ಗಳ ವಿತರಣೆ ನಡೆಯಲಿದೆ ಎಂದು ಫೆಡರೇಶನ್ ಪ್ರಕಟನೆ ತಿಳಿಸಿದೆ.