Advertisement

ಕುಕಡೊಳ್ಳಿ ಗ್ರಾಪಂ ಕಟ್ಟಡ ಉದ್ಘಾಟನೆ

06:08 AM Jun 02, 2020 | Suhan S |

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ ಕಟ್ಟಡವನ್ನು ಶಾಸಕಿ ಲಕ್ಷ್ಮೀ ಹೆಬ್ಟಾಳಕರ್‌ ಉದ್ಘಾಟಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜನರು ಗ್ರಾಮ ಪಂಚಾಯಿತಿಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಅಂದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲುಸಾಧ್ಯವಾಗುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಧಾನ್‌ ಪರಿಷತ್‌ನ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ ಸ್ಥಳೀಯ ಸಂಸ್ಥೆಗಳ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತಿದೆ. ಜನರ ಸಹಭಾಗಿತ್ವ ಇದ್ದಾಗ ಇದು ಇನ್ನಷ್ಟು ಬಲಗೊಳ್ಳುತ್ತದೆ ಎಂದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್‌ ಅಧ್ಯಕ್ಷ ಶಂಕರಗೌಡ ಪಾಟೀಲ, ಯುವ ಮುಖಂಡ ಚನ್ನರಾಜ ಹಟ್ಟಿಹೊಳಿ, ಗ್ರಾಮ ಪಂಚಾಯತ್‌ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಇದೇ ಸಮಯದಲ್ಲಿ ಕುಕಡೊಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ದುಡಿಯುತ್ತಿರುವ ಕಾರ್ಮಿಕರನ್ನು ಭೇಟಿ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್‌ ಅವರು ತಮ್ಮ ಲಕ್ಷ್ಮೀತಾಯಿ ಫೌಂಡೇಷನ್‌ ವತಿಯಿಂದ ರೇಷನ್‌ ಸಾಮಗ್ರಿಗಳನ್ನು ವಿತರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next