ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವವನ್ನು ದೇವಸ್ಥಾನದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ರವಿವಾರ ಉದ್ಘಾಟಿಸಿದರು.
ಭಕ್ತರು ಕೋವಿಡ್ ಮಾರ್ಗ
ಸೂಚಿಯನ್ನು ಪಾಲಿಸಿಕೊಂಡು ದೇವರ ದರ್ಶನ ಪಡೆಯಬೇಕು. ಭಕ್ತ ಸಮೂಹ ಕೋವಿಡ್‌ಗೆ ಹೆದರದೆ ಈ ಮಹಾಮಾರಿಯನ್ನು ಎದುರಿಸಬೇಕಿದೆ. ದೇವರು ಪ್ರತಿಯೊಬ್ಬರಿಗೂ ಒಳಿತು ಮಾಡಲಿ ಎಂದವರು ಹಾರೈಸಿದರು.
ಶಾಸಕರಾದ ಡಿ. ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಯು.ಟಿ. ಖಾದರ್, ಹರೀಶ್ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ, ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್ ಕುಮಾರ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಟ್ರಸ್ಟಿಗಳಾದ ರವಿಶಂಕರ್ ಮಿಜಾರು, ಕೆ. ಮಹೇಶ್ಚಂದ್ರ, ಎಂ. ಶೇಖರ್ ಪೂಜಾರಿ, ಜಗದೀಪ್ ಡಿ. ಸುವರ್ಣ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷೆ ಡಾ| ಅನಸೂಯ ಬಿ.ಟಿ. ಸಾಲ್ಯಾನ್, ಉಪಾಧ್ಯಕ್ಷ ಡಾ| ಬಿ.ಜಿ. ಸುವರ್ಣ, ರಾಧಾಕೃಷ್ಣ, ಸೂರ್ಯಕಾಂತ ಜೆ. ಸುವರ್ಣ, ಚಂದನ್‌ದಾಸ್, ಕಿಶೋರ್ ದಂಡೆಕೇರಿ, ಮುಂಬಯಿ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜಿ. ಅಮೀನ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪ್ರಮುಖರಾದ ಮಮತಾ ಗಟ್ಟಿ, ಕಿರಣ್ ಕುಮಾರ್ ಕೋಡಿಕಲ್, ಅನಿಲ್ ಪೂಜಾರಿ ಉಪಸ್ಥಿತರಿದ್ದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಇದನ್ನೂ ಓದಿ:ವೀಕ್‌ಎಂಡ್ ಹುಮಸ್ಸಿನಲ್ಲಿದ್ದ ಜನರಿಗೆ ಕಿರಿಕಿರಿ ಉಂಟು ಮಾಡಿದ ಮಳೆ