ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನವೀನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.
ಸಂಶೋದನಾ ಶ್ರೇಷ್ಠತಾ ಕೇಂದ್ರದ ನವೀನ ಕಟ್ಟಡವನ್ನು ಕೇಂದ್ರದ ಆಯುಷ್ ಮಂತ್ರಾಲಯದ ರಾಜ್ಯ ಸಚಿವ ಶ್ರೀಪಾಸ್ ಯೆಸ್ಸೊ ನಾಯಕ್ ಉದ್ಘಾಟಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಸಂಶೋಧನಾ ಶ್ರೇಷ್ಠತಾ ಕೇಂದ್ರದ ಚಿಕಿತ್ಸಾ ವಿಭಾಗ ಉದ್ಘಾಟಿಸಿ ಮಾತನಾಡಿ, ಜಗತ್ತಿನಲ್ಲಿ ಪ್ರಚುರವಲ್ಲದ ಪ್ರಕೃತಿ ಚಿಕಿತ್ಸೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಸಲ್ಲಬೇಕು. ಜಗತ್ತಿನ ಗಮನ ಸೆಳೆಯುವಂತಹ ಕಾರ್ಯಯೋಜನೆ ಧರ್ಮಸ್ಥಳದಿಂದ ಮೂಡಿ ಬರುತ್ತದೆ. ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳು ಪ್ರಕೃತಿ ಚಿಕಿತ್ಸೆಯನ್ನು ಬಳಸಿ ಬೆಳೆಸಿದ ರೀತಿ ಜಗತ್ತಿಗೆ ಮಾದರಿ ಎಂದರು.
ಇದನ್ನೂ ಓದಿ:ಈ ವರ್ಷವೂ ಬಜೆಟ್ ನಲ್ಲಿ 40- 50 ಸಾವಿರ ಕೋಟಿ ಖೋತಾ : ಸಿಎಂ ಯಡಿಯೂರಪ್ಪ
ಜೀವ ರಸಾಯನಶಾಸ್ತ್ರ ಪ್ರಯೋಗಾಲಯವನ್ನು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ. ಮುಖ್ಯ ಕುಲಪತಿ ಡಾ.ಎಸ್.ಸಚ್ಚಿದಾನಂದ ಉದ್ಘಾಟಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಸಂಶೋಧನಾ ಶ್ರೇಷ್ಠತಾ ಕೇಂದ್ರದ ಚಿಕಿತ್ಸಾ ವಿಭಾಗ ಉದ್ಘಾಟಿಸಿದರು.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ರಾಜ್ಯ ಆಯುಷ್ ನಿರ್ದೇಶನಾಲಯ ಆಯುಕ್ತೆ ಮೀನಾಕ್ಷಿ ನೇಗಿ, ಭಾರತ ಸರಕಾರದ ಆಯುಷ್ ಮಂತ್ರಾಲಯ ನಿರ್ದೇಶಕ ವಿಕ್ರಮ್ ಸಿಂಗ್ ಉಪಸ್ಥಿತರಿದ್ದರು.
ಉಜಿರೆ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್, ಎಸ್.ಡಿ.ಎಂ. ಎನ್.ವೈ.ಎಸ್.ಎಚ್ ಪ್ರಾಂಶಯಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿ ಡಾ.ಪ್ರಶಾಂತ್ ಶೆಟ್ಟಿ, ಡಾ.ಬಿ.ಯಶೋವರ್ಮ, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಡಿತ್ತಾಯ ಜತೆಗಿದ್ದರು.