Advertisement

Thirthahalli: ಜು.13 ರಂದು ನೂತನ ಪೊಲೀಸ್ ಠಾಣೆ ಉದ್ಘಾಟನೆ – ಆರಗ ಜ್ಞಾನೇಂದ್ರ

01:00 PM Jul 11, 2024 | Kavyashree |

ತೀರ್ಥಹಳ್ಳಿ: ಜುಲೈ 13ರ ಶನಿವಾರ ರಾಜ್ಯ ಸರ್ಕಾರದ ಗೃಹಸಚಿವ ಜಿ. ಪರಮೇಶ್ವರ್ ಅವರು ತೀರ್ಥಹಳ್ಳಿಗೆ ಆಗಮಿಸಿ 14.5 ಕೋಟಿ ವೆಚ್ಚದ ಪೊಲೀಸ್ ಠಾಣೆ, ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ವಸತಿ ಗೃಹದ ಉದ್ಘಾಟನೆ ಮಾಡಲಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

Advertisement

ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತೀರ್ಥಹಳ್ಳಿ ಹಾಗೂ ಕೋಣಂದೂರು ಭಾಗದಲ್ಲಿ 48 ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಗೃಹ ನಿರ್ಮಾಣ ಮಾಡಲಾಗಿದೆ. 3 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳ ಠಾಣೆ ನಿರ್ಮಿಸಲಾಗಿದೆ. ಶನಿವಾರ ಸಂಜೆ ಎಲ್ಲಾ ಕಟ್ಟಡಗಳ ಉದ್ಘಾಟನೆಯಾಗಲಿದೆ ಎಂದು ತಿಳಿಸಿದರು.

ರಥಬೀದಿಯಲ್ಲಿ 1929ರಲ್ಲಿ ಪೊಲೀಸ್ ಠಾಣೆ ಕಟ್ಟಲಾಗಿತ್ತು. ಬ್ರಿಟಿಷ್ ಕಾಲದಿಂದ ಠಾಣೆ ಹಾಗೆಯೇ ಇತ್ತು. ಶತಮಾನದ ನಂತರ ಮತ್ತೆ ಕಟ್ಟಡ ಕಟ್ಟಿದ್ದೇವೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಬಸವರಾಜ್ ಬೊಮ್ಮಾಯಿ ಸರ್ಕಾರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಹಾಗೂ ಪೊಲೀಸ್ ಠಾಣೆ ನೀಡಲು ತೀರ್ಮಾನಿಸಿ ಅನುದಾನ ಬಿಡುಗಡೆ ಮಾಡಿದ್ದರು ಎಂದು ಮಾಹಿತಿ ನೀಡಿದರು.

ವಸತಿ ಗೃಹ ಮತ್ತು ಕಚೇರಿ ಇದೆರಡು ಚೆನ್ನಾಗಿದ್ದರೆ ಪೊಲೀಸ್ ಅಧಿಕಾರಿಗಳು ಉತ್ಸಾಹದಿಂದ ಕೆಲಸ ಮಾಡಬಹುದು ಎಂಬ ಕಾರಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಇದೊಂದು ಬಹಳ ದೊಡ್ಡ ಅನುದಾನ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಆರಗ ಜ್ಞಾನೇಂದ್ರ, ಕಿಮ್ಮನೆ ರತ್ನಾಕರ್, ಆರ್.ಎಂ.ಮಂಜುನಾಥ್ ಗೌಡ, ಸೇರಿ ರಾಜ್ಯಮಟ್ಟದ ಅಧಿಕಾರಿಗಳು ಇರಲಿದ್ದಾರೆ ಎಂದು ತಿಳಿಸಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ತಹಶೀಲ್ದಾರ್ ಜಕ್ಕಣ್ಣ ಗೌಡರ್, ಡಿವೈಎಸ್’ಪಿ ಗಜಾನನ ವಾಮನ ಸುತಾರ, ಸರ್ಕಲ್ ಇನ್ಸ್ ಪೆಕ್ಟರ್ ಅಶ್ವಥ್ ಗೌಡ, ಆಗುಂಬೆ ಇನ್ಸ್ ಪೆಕ್ಟರ್ ಶ್ರೀಧರ್, ಅಗ್ನಿಶಾಮಾಕ ದಳದ ಮಹಾಲಿಂಗಪ್ಪ, ಕಾರ್ಯನಿರ್ವಹಣಾ ಅಧಿಕಾರಿ ಶೈಲಾ ಸೇರಿ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next