Advertisement

ಮಾಳೆಗಾಂವನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

12:17 PM Oct 30, 2017 | Team Udayavani |

ಬೀದರ: ವೈದ್ಯರು ಸಮಯಕ್ಕೆ ಸರಿಯಾಗಿ ಸೇವೆಗೆ ಹಾಜರಾಗಿ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಬೇಕು ಎಂದು ಶಾಸಕ ರಹೀಮ್‌ ಖಾನ್‌ ಕಿವಿ ಮಾತು ಹೇಳಿದರು.

Advertisement

ಮಾಳೆಗಾಂವ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಯ ಎರಡು ಕೋಣೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸಲಾಗಿದೆ. ಸದ್ಯ ಹೊರ ರೋಗಿಗಳ ತಪಾಸಣಾ ವಿಭಾಗದ ವ್ಯವಸ್ಥೆ ಮಾಡಲಾಗಿದೆ. ಬರುವ ದಿನಗಳಲ್ಲಿ ಕೇಂದ್ರಕ್ಕೆ ಸ್ವಂತ ಕಟ್ಟಡ ಸೇರಿದಂತೆ ವಿವಿಧ ಸೌಕರ್ಯಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು. 

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಾಲ್ಕು ಎಕರೆ ಜಮೀನು ಬೇಕಿದೆ. ಕಟ್ಟಡ ನಿರ್ಮಾಣಕ್ಕಾಗಿ ರೂ. 2 ಕೋಟಿ ಅಗತ್ಯವಿದೆ. ಒಂದು ಲಕ್ಷ ರೂ. ವಂತಿಗೆ ಭರಿಸಬೇಕಾಗಲಿದೆ. ಗಡಿಭಾಗದ ಜನರಿಗೆ ಆರೋಗ್ಯ ಸೇವೆ ಒದಗಿಸಲು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಜಿಪಂ ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ ಮಾತನಾಡಿದರು. ಜಿಲ್ಲಾ ಆರೋಗ್ಯ
ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ.ಎ. ಜಬ್ಟಾರ್‌, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್‌ ಚಿದ್ರಿ, ತಾಪಂ, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next