Advertisement

Karnataka: ರಾಮಮಂದಿರ ಉದ್ಘಾಟನೆ: ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

12:36 AM Jan 21, 2024 | Team Udayavani |

ಬೆಂಗಳೂರು: ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆ ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

Advertisement

ಶನಿವಾರ ಸಾಮಾಜಿಕ ಜಾಲತಾಣ “ಎಕ್ಸ್‌’ನಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ಕೂಡಲೇ ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್‌ ಸರಕಾರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಯಲ್ಲಿ ಶಾಂತಿ ಕಾಪಾಡುವುದಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next