Advertisement

ಆದಿಚುಂಚನಗಿರಿ ಶ್ರೀಗಳಿಂದ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಉದ್ಘಾಟನೆ

04:43 PM Oct 04, 2021 | Team Udayavani |

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಪ್ರಸಕ್ತ ಸಾಲಿನ “ಶ್ರೀರಂಗಪಟ್ಟಣ ದಸರಾ ಮಹೋತ್ಸವ”ವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರುಗಳಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಉದ್ಘಾಟಿಸುವ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಯುವ ಸಬಲೀಕರಣ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ನಾರಾಯಣಗೌಡ ತಿಳಿಸಿದ್ದಾರೆ.

Advertisement

ಅಕ್ಟೋಬರ್ 9ರಿಂದ 11ರವರೆಗೆ 3 ದಿನಗಳ ಕಾಲ “ಶ್ರೀರಂಗಪಟ್ಟಣ ದಸರಾ ಮಹೋತ್ಸವ”ನಡೆಯಲಿದ್ದು, ವಿಶೇಷ ಸಾಂಪ್ರದಾಯಿಕ ನಾಡಹಬ್ಬಕ್ಕೆ ಚಾಲನೆ ನೀಡುವಂತೆ ಶ್ರೀಗಳಲ್ಲಿ ಕೋರಲಾಗಿದೆ. ಅಲ್ಲದೆ, ಈಗಾಗಲೇ ಸಿದ್ಧತೆಗಳನ್ನು ಸಹ ಭರದಿಂದ ಕೈಗೊಳ್ಳಲಾಗಿದ್ದು, ಯಾವುದೇ ಲೋಪವಾಗದಂತೆ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ನರೇಂದ್ರ ಮೋದಿ ಅಲೆ ಸದಾ ಇದ್ದೆ ಇರುತ್ತದೆ: ಡಾ.ಅಶ್ವಥ್ ನಾರಾಯಣ್

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳ, ಅರ್ಥಪೂರ್ಣವಾಗಿ ಆಚರಿಸಲು ಕ್ರಮವಹಿಸಿದ್ದು, ಎಲ್ಲರ ಸಹಕಾರವನ್ನು ಕೋರಲಾಗಿದೆ. ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳ ಸಹಕಾರದಿಂದ ಮಾದರಿಯಾಗಿ ನೆರವೇರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next