Advertisement
ವಿಧಾನ ಪರಿಷತ್ತು ಚುನಾವಣೆ ನೀತಿ ಸಂಹಿತೆ ಪೂರ್ಣಗೊಂಡ ಬಳಿಕ ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರ ಪದಗ್ರಹಣ ನಡೆಯಲಿದೆ. ಆ ನಿಟ್ಟಿನಲ್ಲಿ ಚಟುವಟಿಕೆಗಳು ಕನ್ನಡ ಭವನದಲ್ಲಿ ಸಾಗಿದ್ದು, ಜೂ. 13ರಂದು ಅಧಿಕಾರ ಸ್ವೀಕರಿಸುವ ನಿರೀಕ್ಷೆಯಿದೆ.
Related Articles
ಜೂ.13ರಂದು ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರದ ಅಧ್ಯಕ್ಷರ ಮತ್ತು ಸದಸ್ಯರು ಅಧಿಕಾರ ಸ್ವೀಕರಿಸಲಿದ್ದಾರೆ. ಆ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಆಹ್ವಾನ ನೀಡಿ ಅವರ ಸಮ್ಮುಖದಲ್ಲಿ ವಿಶೇಷ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳುವ ಇರಾದೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊಂದಿದೆ ಎಂದು ಕನ್ನಡ ಭವನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರನ್ನು ಸಂಪರ್ಕಿಸುವ ಕೆಲಸ ನಡೆದಿದೆ. ಆದರೆ ಸಚಿವರು ಕಾರ್ಯಕ್ರಮಕ್ಕೆ ಬರುವ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಸಚಿವರನ್ನು ಆಹ್ವಾನಿಸುವ ನಿಟ್ಟಿನಲ್ಲೆ ಕನ್ನಡ ಭವನದ ಕಾರ್ಯ ಚಟುವಟಿಕೆಗಳು ನಡೆದಿವೆ ಎಂದು ತಿಳಿಸಿದ್ದಾರೆ.
Advertisement
ಜೂ. 13ರಂದು ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಅಂದು ನಾನು ಕೂಡ ಅಧಿಕಾರ ಸ್ವೀಕರಿಸುತ್ತೇನೆ. ಲೋಕಸಭೆ ಮತ್ತು ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಧಿಕಾರ ಸ್ವೀಕಾರಕ್ಕೆ ಅಡ್ಡಿಉಂಟಾಗಿತ್ತು.-ಡಾ| ಎಲ್.ಎನ್.ಮುಕುಂದರಾಜ್, ಸಾಹಿತ್ಯ ಅಕಾಡೆಮಿ ನಿಯೋಜಿತ ಅಧ್ಯಕ್ಷ – ದೇವೇಶ ಸೂರಗುಪ್ಪ